ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಈ ಕುರಿತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ನಮ್ಮ ಶಾಸಕರು ಎಲ್ಲಾ ವಿಚಾರ ಪ್ರಸ್ತಾಪಿಸಿದ್ದಾರೆ ಈಗ ಫೋನ್ ಕದ್ದಾಲಿಕೆ ಮಾಡುವ ಅವಶ್ಯಕತೆ ಏನಿದೆ? ಎಂದು ಪ್ರಶ್ನಿಸಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು. ಸ್ವಾಮೀಜಿಯವರ ಫೋನ್ ಕದ್ದಾಲಿಕೆ ಎಂಬ ಆರೋಪವಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
Key words: phone tapping, Minister, Ramalingareddy
The post ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





