28
August, 2026

A News 365Times Venture

28
Friday
August, 2026

A News 365Times Venture

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

Date:

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ ಉಂಟಾಗುವ ಗರ್ಭಕಂಠದ ಕ್ಯಾನ್ಸರ್, ಇತರ ಕೆಲವು ಕ್ಯಾನ್ಸರ್ ಗಳಿಂದ ರಕ್ಷಿಸುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕುಮಾರಸ್ವಾಮಿ ಪಿಸಿ ಅವರು ತಿಳಿಸಿದರು.

ಮೈಸೂರಿನ ಎಸ್.ಎಂ.ಟಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ (ಹೆಚ್.ಪಿ.ವಿ) ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕುಮಾರಸ್ವಾಮಿ ಪಿಸಿ ಅವರು ಉದ್ಘಾಟಿಸಿ ಮಾತನಾಡಿದರು.

HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಎಂಬ ವೈರಸ್ ನಿಂದ ಉಂಟಾಗುವ ಕೆಲವು ಗಂಭೀರ ಕಾಯಿಲೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಈ ಕಾಯಿಲೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಗುದ ಮತ್ತು ಗಂಟಲು ಕ್ಯಾನ್ಸರ್ ಎಂಬ ವಿವಿಧ ಭಾಗದ ಕ್ಯಾನ್ಸರ್ ಗಳಿದ್ದು ಹೆಚ್.ಪಿವಿ.ಲಸಿಕೆಯಿಂದ ತಡೆಗಟ್ಟಬಹುದಾಗಿದೆ. ಇದರಿಂದ ನಮ್ಮ ಹೆಣ್ಣುಮಕ್ಕಳ ಆರೋಗ್ಯ ಈ ನಾಡಿನ ಸುಭದ್ರತೆ ಭವಿಷ್ಯದ ಬುನಾದಿಯಾಗಿದೆ ಎಂದರು.

ಪ್ರಸ್ತುತ ಸದರಿ ಲಸಿಕೆಯನ್ನು14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ ಒಳಗಿನ ಹೆಣ್ಣು ಮಕ್ಕಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸಾರ ನೀಡಲಾಗುವುದು ಹಾಗೂ ಸದರಿ ಲಸಿಕಾಕರಣವನ್ನು ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಮಾರ್ಗಸೂಚಿ ಅನುಸಾರ ಆಯೋಜನೆ ಮಾಡಲಾಗುತ್ತಿದೆ. ಸದರಿ ಲಸಿಕೆಯ ಪ್ರಮುಖ ಫಲಾನುಭವಿಗಳು 14 ವರ್ಷದ ಎಲ್ಲಾ ಹೆಣ್ಣು ಮಕ್ಕಳಾಗಿದ್ದು,  HPV ಲಸಿಕಾಕರಣವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ತಜ್ಞ ವೈದ್ಯರ ಮೂಲಕ ಲಸಿಕೆಯನ್ನು ನೀಡಲಾಗುವುದು ಎಂದರು.

ಲಸಿಕೆ ಪಡೆದ ಮ್ಕಕಳಿಗೆ ಯೂ-ವಿನ್ ತಂತ್ರಾಂಶದಲ್ಲಿ ನೋಂದಣಿ ಮಾಡಿ ಆ ಮೂಲಕ ಲಸಿಕೆ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಫಲಾನುಭವಿಗಳು ಆಗತ್ಯವಾದ ಸೂಕ್ತ ಗುರುತಿನ ಚೀಟಿಯೊಂದಿಗೆ ಮೊಬೈಲ್ ನಂ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ.  ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು HPV ಲಸಿಕೆಯು ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಯಾಗಿದೆ. ಈ ಲಸಿಕೆಯನ್ನು ಪಡೆಯುವ ಮೂಲಕ ಹೆಣ್ಣು ಮಕ್ಕಳ  ಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಎಲ್ಲಾ ಪೋಷಕರು ಸಹಕರಿಸಿ ಎಂದು ಮನವಿ ಮಾಡಿದರು.

ಹೆಣ್ಣು ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವುದರೊಂದಿಗೆ ಸುರಕ್ಷಿತ ಲಸಿಕೆ, ಸುಂದರ ಭವಿಷ್ಯ- ನಮ್ಮ ಹೆಣ್ಣು ಮಕ್ಕಳ ಆರೋಗ್ಯ ನಮ್ಮ ಆದ್ಯತೆ ಎಂಬ ಘೋಷ ವಾಕ್ಯದೊಂದಿಗೆ 14 ವರ್ಷದ ಎಲ್ಲಾ ಹೆಣ್ಣು ಮಕ್ಕಳಿಗೆ HPV ಲಸಿಕೆಯನ್ನು ಹಾಕಿಸುವುದರ ಮೂಲಕ ಗರ್ಭಕಂಠದ ಕ್ಯಾನ್ಸರ್ ಮುಕ್ತ ಸಮಾಜ-ಪ್ರತಿಯೊಬ್ಬ ಅರ್ಹ ಎಲ್ಲಾ ಹೆಣ್ಣು ಮಗುವಿಗೆ ತಲುಪುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾರ್ಯಪ್ರವೃತವಾಗಿದ್ದು, ಜಿಲ್ಲಾ ಆಡಳಿತದ ಪರವಾಗಿ ಲಸಿಕೆ ಪಡೆಯುವಂತೆ ಮನವಿ ಮಾಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಮಹಮ್ಮದ್ ಸಿರಾಜ್ ಅಹಮ್ಮದ್, ಮೈಸೂರು ತಾಲ್ಲೂಕು ಆರೋಗ್ಯಾಧಿಕಾರಿ(ಪ್ರ), ಡಾ. ಅರುಣಕುಮಾರ, ಆಡಳಿತ ವೈದ್ಯಾಧಿಕಾರಿ ಡಾ. ಅನುರಾಧ,   ಹಾಗೂ ಎಸ್.ಎಂ.ಟಿ ಆಸ್ಪತ್ರೆ ತಜ್ಞ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು  ಉಪಸ್ಥಿತರಿದ್ದರು.

Key words: Mysore, HPV vaccine, campaign, 14-year-old girls

The post 14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು ದಸರಾ: ಅರಮನೆ ಪ್ರವೇಶ ವೇಳೆ ಗಾಬರಿಗೊಂಡ ‘ಶ್ರೀರಾಮ’ ಆನೆ

ಮೈಸೂರು,ಆಗಸ್ಟ್,28,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ...

വിശ്വാസികൾക്ക് എത്രത്തോളം വേദനയുണ്ടാക്കും ; സണ്ണി എം. കപിക്കാട് മാപ്പ് പറയണം – അബ്ദുള്ള ബാസിൽ

ജാതീയതയുടെ പേരിലുള്ള ഒരുപാട് പീഡനങ്ങൾ അനുഭവിച്ചവരാണ് ദളിതർ. അവരുടെ ആശയപ്രചാരണത്തിനും അഭിപ്രായസ്വാതന്ത്ര്യത്തിനും...

`நிதியமைச்சர் மரியவில்சன் இங்கிலாந்தின் அரசரா?’ – அடிதடி வழக்கில் நீதிமன்றம் கடுகடுத்த பின்னணி!

தமிழக சட்டமன்றத் தேர்தலில் தமிழக வெற்றிக் கழகம் சார்பில் ஆர்.கே.நகர் தொகுதியில்...

OTR: ఎమ్మెల్యే పదవిని వదిలి మేయర్ అవుతారా? విశాఖలో టీడీపీ నేతల కొత్త స్కెచ్!

OTR: కొడితే కొట్టాలిరా…. సిక్స్‌ కొట్టాలి అంటూ కొత్తగా సాంగులు సింగుతున్నారట...