12
March, 2026

A News 365Times Venture

12
Thursday
March, 2026

A News 365Times Venture

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

Date:

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಸಂಕಷ್ಟ ಎದುರಾಗಿದೆ.

ಈ ಮಧ್ಯೆ ಇದೀಗ ರಾಜ್ಯ ಬಜೆಟ್ ಅಧಿವೇಶನದಲ್ಲಿ  ರಾಜ್ಯದಲ್ಲಿ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ ಗಳ ಕೊರತೆ ವಿಚಾರ ಪ್ರತಿಧ್ವನಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ  ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ನಡೆದಿದ್ದು ಆರೋಪ-ಪ್ರತ್ಯಾರೋಪಗಳಿಂದ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.

ಶೂನ್ಯವೇಳೆಯಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಬಗ್ಗೆ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು  ಗಮನ ಸೆಳೆದರು. “900 ರೂಪಾಯಿ ಇದ್ದ ಸಿಲಿಂಡರ್‌ ಗೆ ಇಂದು 1,800 ರೂಪಾಯಿ ನೀಡಬೇಕಾದ ಪರಿಸ್ಥಿತಿ ಎದುರಾಗಿದ್ದು ಇದಕ್ಕೆ ಪ್ರಧಾನಿ ಮೋದಿ ಸರ್ಕಾರದ ದುರ್ಬಲ ವಿದೇಶಾಂಗ ನೀತಿಯೇ ಕಾರಣ” ಎಂದು ಆರೋಪಿಸಿದರು.

ಶಾಸಕ ರಂಗನಾಥ್ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ರಂಗನಾಥ್ ವಿರುದ್ಧ ಮುಗಿಬಿದ್ದು, ತೀವ್ರ ಆಕ್ರೋಶ ಹೊರಹಾಕಿದರು. ಈ ವೇಳೆ ಮಧ್ಯಪ್ರವೇಶಿಸಿದ  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, “ದೇಶದ ಆರ್ಥಿಕ ಮತ್ತು ವಿದೇಶಾಂಗ ನೀತಿ ಏನಾಗಿದೆ? ಪ್ರಧಾನಿಯವರು ಇಷ್ಟೆಲ್ಲಾ ನಡೆಯುತ್ತಿದ್ದರೂ ಯಾಕೆ ಮೌನವೇಕೆ? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಬಿಜೆಪಿ ಶಾಸಕ ಸುನಿಲ್ ಕುಮಾರ್, “ಯುದ್ಧದ ಸಂದರ್ಭದಲ್ಲಿ ಇಡೀ ವಿಶ್ವವೇ ಈ ಸಮಸ್ಯೆ ಎದುರಿಸುತ್ತಿದೆ. ಆದರೆ ಈ ಸರ್ಕಾರಕ್ಕೆ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಯೋಗ್ಯತೆ ಇಲ್ಲ ಎಂದು ಟಾಂಗ್ ಕೊಟ್ಟರು.

Key words: LPG Cylinder, Shortage,  Assembly, BJP, Congress

The post LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രധാനമന്ത്രിയെ വിമര്‍ശിക്കുന്ന സോഷ്യല്‍ മീഡിയ പോസ്റ്റുകള്‍ക്ക് പൂട്ട്; ഉത്തരവിട്ട് കേന്ദ്രം

ന്യൂദല്‍ഹി: പ്രധാനമന്ത്രി നരേന്ദ്രമോദിയെയോ സര്‍ക്കാരിനെയോ വിമര്‍ശിക്കുന്നതോ പരിഹസിക്കുന്നതോ ആയ സോഷ്യല്‍ മീഡിയ...

திருச்சி: "விஞ்ஞான ரீதியான ஊழலுக்கு பெயர் போனது தான் தி.மு.க!" – பிரதமர் மோடி காட்டம்

தமிழகத்திற்கு இந்த ஆண்டில் இரண்டாவது முறையாக வருகை தந்துள்ளார் பிரதமர் மோடி....

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು...