ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ ಸಮಸ್ಯೆ ಉಂಟಾಗಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತರಾಟೆ ತೆಗೆದುಕೊಂಡಿದ್ದಾರೆ.
ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ದೇಶದೆಲ್ಲಡೆ ಗ್ಯಾಸ್ ಸಿಲಿಂಡರ್ ಸಮಸ್ಯೆಯಾಗಿದೆ. ಯುದ್ದದ ಬಗ್ಗೆ ಗೊತ್ತಿದ್ದರೂ ಮುಂಜಾಗ್ರತಾ ಕ್ರಮ ವಹಿಸಿಲ್ಲ. ಕೇಂದ್ರ ಸರ್ಕಾರ ಸಮರ್ಪಕವಾಗಿ ನಿಭಾಯಿಸಿಲ್ಲ. ಗ್ಯಾಸ್ ಸಿಲಿಂಡರ್ ಕೊರತೆಯಿಂದ ಹೋಟೆಲ್ ರೆಸ್ಟೋರೆಂಟ್ ಸೇರಿ ಹಲವು ಕ್ಷೇತ್ರಗಳಿಗೆ ಸಮಸ್ಯೆಯಾಗಿದೆ ಎಂದರು.
ಜವಳಿ, ವಿಮಾನಯಾನ, ಇಂಧನ, ಉಕ್ಕು, ಗಾಜು ತಯಾರಿಕೆ, ಆಟೋ ಉದ್ಯಮಕ್ಕೆ ಹೊಡೆತ ಬಿದ್ದಿದೆ. ಗ್ಯಾಸ್ ಸಿಲಿಂಡರ್ ಸಮಸ್ಯೆ ವ್ಯಾಪಕ ತಲೆದೂರಿದೆ. ಕೂಡಲೇ ಎಲ್ಪಿಜಿ ಸಮಸ್ಯೆ ಬಗೆಹರಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.
Key words: Gas cylinder, issue, Mallikarjuna Kharge, against, Central Government
The post ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





