ಬಾಗಲಕೋಟೆ,ಮಾರ್ಚ್,20,2026 (www.justkannada.in): ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಪತ್ನಿ ರಾಜೇಶ್ವರಿ ಜತೆ ಆಗಮಿಸಿ ಇಂದು ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಒಳ್ಳಯ ಮುಹೂರ್ತ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಟಿಕೆಟ್ ಘೋಷಣೆಯಾಗದಿದ್ದರೂ ಕಾಂಗ್ರೆಸ್ ಆಕಾಂಕ್ಷಿ ನಾಮಪತ್ರ
ಇತ್ತ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗದಿದ್ದರೂ ದಿ.ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ತಾಯಿ ಪ್ರಭಾ ಮಲ್ಲಿಕಾರ್ಜುನ್ ಅವರ ಜೊತೆ ಬಂದು ನಾಮಪತ್ರ ಸಲ್ಲಿಸಿದ್ದಾರೆ. ಸಮರ್ಥ್ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇತ್ತ ಮುಸ್ಲೀಂ ಸಮುದಾಯದವರಿಗೆ ಟಿಕೆಟ್ ನೀಡುವಂತೆ ಒತ್ತಡ ಬಂದಿದೆ.
Key words: By-election, BJP candidate, files, nomination
The post ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





