ಬೆಂಗಳೂರು,ಮಾರ್ಚ್,21,2026 (www.justkannada.in): ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ಖಂಡಿಸಿ ಮತ್ತು ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರು ಜಿಲ್ಲೆ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ ಉಂಟಾಗಿದೆ. ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದ್ದು, ಪೆಟ್ರೋಲ್ ಡೀಸೆಲ್ ಅಭಾವ ಉಂಟಾಗಿದೆ. ಇದರಿಂದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗೆ ಮುಂದುವರೆದರೆ ಕರ್ನಾಟಕ ಬಂದ್ ಗೆ ಕರೆ ನೀಡುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ ಪಡೆದು ಕರೆದೊಯ್ದರು.
Key words: Vatal Nagaraj, protests, blocking, highway
The post ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





