25
March, 2026

A News 365Times Venture

25
Wednesday
March, 2026

A News 365Times Venture

ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ: ಪ್ರಮುಖ ಅಂಶಗಳು ಹೀಗಿವೆ ನೋಡಿ..!

Date:

ಬೆಂಗಳೂರು, ಮಾರ್ಚ್,25,2026 (www.justkannada.in):  ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ನಡೆಯುತ್ತಿದ್ದು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದರು.

ಇಂದು ವಿಧಾನಸಭೆಯಲ್ಲಿ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು..

21 ಜನ ವಿರೋಧಪಕ್ಷದವರು ,ಆಡಳಿತ ಪಕ್ಷದವರು ಜೆಡಿಎಸ್ ಹಾಗೂ ಉಳಿದವರು ಸೇರಿದಂತೆ ಒಟ್ಟು 50 ಜನ ಮಾತನಾಡಿದ್ದು,ಒಟ್ಟು  24 ಗಂಟೆ 45 ನಿಮಿಷ ಚರ್ಚೆ ನಡೆಸಲಾಗಿದೆ. ನಾನು 17 ಬಜೆಟ್ ಗಳನ್ನು ಮಂಡಿಸಿದ್ದು , ಬಜೆಟ್ ಮೇಲೆ 50 ಜನ ಮಾತನಾಡಿದ್ದು, ಇದೇ ಮೊದಲು. ಚರ್ಚೆಯಲ್ಲಿ ಭಾಗವಹಿಸಿ, ಬಜೆಟ್ ನ್ನು ಟೀಕೆ, ಸ್ವಾಗತ, ವಿಮರ್ಶೆ ಮಾಡಿದ ಎಲ್ಲರಿಗೂ ನನ್ನ ಅಭಿನಂದನೆಗಳು.

ವಿರೋಧಪಕ್ಷದವರು ಸೋಷಿಯಲ್ ಮೀಡಿಯಾಕ್ಕೆ ಹೂರಣ ನೀಡಲು ಬಹಳ ಕಸರತ್ತು ಮಾಡಿ ಪದಪುಂಜಗಳನ್ನು ಬಳಸಿದ್ದಾರೆ. ವಿರೋಧಪಕ್ಷದ ನಾಯಕರು ಆಯವ್ಯಯದ ಬಗ್ಗೆ ಸ್ಥೂಲವಾಗಿ ಅಧ್ಯಯನ ಮಾಡದೇ, ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು, ಆಳವಾದ ಅಧ್ಯಯನ ನಡೆಸಿಲ್ಲ ಎಂದು ಕಂಡುಬರುತ್ತದೆ.

ವಿರೋಧಪಕ್ಷದವರು ಬಜೆಟ್ ನ್ನು ಎಷ್ಟೇ ಟೀಕಿಸಿದರೂ, ಮಾವಿನ ಹಣ್ಣು ಬೇವಿನ ಹಣ್ಣು ಆಗಲು ಸಾಧ್ಯವಿಲ್ಲ.ಬಜೆಟ್ ಖಾಲಿ ಚೊಂಬು ಎಂಬ ಟೀಕಿಸಲಾಗಿದೆ. ಆದರೆ ಕರ್ನಾಟಕಕ್ಕೆ ಖಾಲಿ ಚೊಂಬು ನೀಡದೇ, ತುಂಬಿದ ಚೊಂಬನ್ನೇ ನೀಡಲಾಗಿದೆ. ನಮ್ಮ ಬಜೆಟ್ ತುಂಬಿದ ಕೊಡ.

ಪ್ರಮುಖ ದಿನಪತ್ರಿಕೆಗಳ ಸಂಪಾದಕೀಯಗಳಲ್ಲಿ ಹಾಗೂ ಆರ್ಥಿಕ ತಜ್ಞರು, ಎಲ್ಲ ಸಮುದಾಯಗಳನ್ನು ತಲುಪಿದ ಬಜೆಟ್, ರಾಜ್ಯದ ಸುಸ್ಥಿರ ಮತ್ತು ಸಶಕ್ತ  11 ಜಿ ಮಾದರಿಯ ಬಜೆಟ್,ನೀರಾವರಿ ಮತ್ತು ಮೂಲಸೌಕರ್ಯಕ್ಕೆ ಒತ್ತು,  ಜನಪ್ರಿಯತೆ ಮತ್ತು ವಾಸ್ತವದ ಬಜೆಟ್ , ರಾಜ್ಯದ ಬೊಕ್ಕಸವನ್ನು ಸುಸ್ಥಿರವಾಗಿಡುವ ದೂರದೃಷ್ಟಿಯ ಬಜೆಟ್,  ನಿರುದ್ಯೋಗ ನಿವಾರಣೆ, ಸಾಮಾಜಿಕ ಭದ್ರತೆ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯದ ಮೇಲೆ ಕೇಂದ್ರಿತ ಹಾಗೂ ಎಲ್ಲರನ್ನೊಳಗೊಂಡ ಬಜೆಟ್, ಹೂಡಿಕೆಗಳಿಗೆ ಹಾಗೂ ನವೋದ್ಯಮಿಗಳಿಗೆ ನೆರವಾಗುವ ಯೋಜನೆಗಳ ಬಜೆಟ್ ಎಂಬ ಸಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ.

ರಾಜ್ಯದ ಆಯವ್ಯಯದ ಗಾತ್ರ , ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ವಿವರಗಳನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

ರಾಜ್ಯದ ಈ ವರ್ಷದ ಬಜೆಟ್ ಗಾತ್ರ 4,48,004 ಕೋಟಿ ರೂ.ಗಳಷ್ಟಾಗಲಿದೆ.  2025-26ರಲ್ಲಿ ನಮ್ಮ ಬಜೆಟ್ ಗಾತ್ರ 4,09,549 ರೂಗಳಷ್ಟಿತ್ತು. ಕಳೆದ ವರ್ಷದ ಆಯವ್ಯಯಕ್ಕೆ ಹೋಲಿಸಿದರೆ ಈ ಆಯವ್ಯಯವು 38,455 ಕೋಟಿ ರೂಗಳಷ್ಟು ಹೆಚ್ಚಿನ ಗಾತ್ರದ್ದಾಗಿದೆ.  ಶೇ.9.4ರಷ್ಟು ಬೆಳವಣಿಗೆಯಾಗಿದೆ. ಕೇಂದ್ರ ಸರ್ಕಾರದ ಬಜೆಟ್ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.5.6 ರಷ್ಟು ಮಾತ್ರ ಬೆಳವಣಿಗೆ ಸಾಧಿಸಿದೆ (2025 ರಲ್ಲಿ 50.65 ಲಕ್ಷ ಕೋಟಿಗಳ ಬಜೆಟ್ ಮಂಡಿಸಿದ್ದರು. ಈ ವರ್ಷ 53.47 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದಾರೆ].

2025-26 ರಲ್ಲಿ ದೇಶದ ಜಿಡಿಪಿಯು ಸ್ಥಿರ ಬೆಲೆಗಳಲ್ಲಿ ಶೇ.7.4 ರಷ್ಟು ಬೆಳವಣಿಗೆ ದಾಖಲಿಸಿದರೆ, ರಾಜ್ಯದ ಜಿ.ಎಸ್.ಡಿ.ಪಿಯು ಶೇ.8.1 ರಷ್ಟು ಬೆಳವಣಿಗೆ ದಾಖಲಿಸಿದೆ. ಕರ್ನಾಟಕದ ಜಿಎಸ್‌ಡಿಪಿ ದೇಶದ ಜಿಡಿಪಿ ಬೆಳವಣಿಗೆಗಿಂತ ಹೆಚ್ಚಿರುವುದು ನಮ್ಮ ಸರ್ಕಾರ ಬಂಡವಾಳ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅರ್ಥಿಕ ಪ್ರಗತಿಗೆ ಉತ್ತೇಜನ ನೀಡುತ್ತಿರುವುದನ್ನು ಹೇಳುತ್ತದೆ. ಈ ಮೂಲಕ ರಾಜ್ಯದ ಆರ್ಥಿಕತೆಯನ್ನು ದೇಶದಲ್ಲಿಯೇ ನಂ.1 ಮಾಡುವತ್ತ ಹೆಜ್ಜೆಯಿಟ್ಟಿದ್ದೇವೆ.

ಇಷ್ಟೆಲ್ಲದರ ನಡುವೆ ನಮ್ಮ ವಿತ್ತೀಯ ಶಿಸ್ತನ್ನು ಹಾಳು ಮಾಡಿಲ್ಲ. ನಮ್ಮ ವಿತ್ತೀಯ ಕೊರತೆ 2026-27ನೇ ಸಾಲಿನಲ್ಲೂ ಶೇ.2.95 ರಷ್ಟಿರಲಿದೆ. ನಮ್ಮ ಜಿ.ಎಸ್.ಡಿ.ಪಿ ಈ ವರ್ಷ 33,05,500 ಕೋಟಿ ರೂ. ಗಳಷ್ಟಿರಲಿದೆ ಎಂದು ಅಂದಾಜು ಮಾಡಲಾಗಿದೆ.

[ದೇಶದ ಜಿಡಿಪಿ ಗಾತ್ರವು 2026-27 ರ ಆಯವ್ಯಯದಲ್ಲಿ ಪ್ರಸ್ತಾಪಿಸಿರುವಂತೆ 393 ಲಕ್ಷ ಕೋಟಿ ರೂಗಳಷ್ಟಾಗಲಿದೆ].

ನಮ್ಮ ಒಟ್ಟು ಹೊಣೆಗಾರಿಕೆಗಳು ಜಿ.ಎಸ್.ಡಿ.ಪಿ.ಗೆ ಎದುರಾಗಿ ಶೇ.24.94 ರಷ್ಟಿರಲಿದೆ. ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡದAತೆ ವಿತ್ತೀಯ ಶಿಸ್ತನ್ನು ಕಾಪಾಡಿಕೊಂಡಿದ್ದೇವೆ. ಆದರೆ ಕೇಂದ್ರ ಸರ್ಕಾರದ ಹೊಣೆಗಾರಿಕೆಗಳು ಜಿ.ಡಿ.ಪಿ.ಗೆ ಎದುರಾಗಿ ಶೇ.55.6 ರಷ್ಟಿದೆ.  [ಇದು ಶೇ.40 ರ ಒಳಗೆ ಇರಬೇಕು]

ನಮ್ಮ ವಿತ್ತೀಯ ಕೊರತೆಯು ಜಿಎಸ್‌ಡಿಪಿಯ ಶೇ.3 ರ ಒಳಗೆ ಇದೆ. ಮುಂದಿನ ವರ್ಷಕ್ಕೆ ಶೇ.2.95 ರಷ್ಟು ಇರಲಿದೆ ಎಂಬುದು ನಮ್ಮ ಅಂದಾಜಾಗಿದೆ. ಆದರೆ 2026-27ನೇ ಸಾಲಿಗೆ ಕೇಂದ್ರದ ವಿತ್ತೀಯ ಕೊರತೆ ಜಿ.ಡಿ.ಪಿ.ಯ ಶೇ.4.3 ರಷ್ಟು ಇರಲಿದೆ ಎಂದು ನಿರ್ಮಲಾ  ಸೀತಾರಾಮನ್ ಹೇಳಿದ್ದಾರೆ.

16 ನೇ ಹಣಕಾಸು ಆಯೋಗದ ಮಾರ್ಗಸೂಚಿಯ ಅನುಸಾರ ರಾಜ್ಯಗಳು ಶೇ.3 ರೊಳಗೆ ಹಾಗೂ ಕೇಂದ್ರ ಸರ್ಕಾರ ಶೇ.4.2 ರೊಳಗೆ ವಿತ್ತೀಯ ಕೊರತೆ ಹೊಂದಿರಬೇಕು. ಇದನ್ನು ಕೇಂದ್ರ ಸರ್ಕಾರ ಅನುಷ್ಠಾನ ಮಾಡಿಲ್ಲ ಎಂಬುದನ್ನು ಸದನದ ಗಮನಕ್ಕೆ ತರಬಯಸುತ್ತೇನೆ.

ಬಜೆಟ್ ನ ಮೂಲಭೂತ ಅಂಶಗಳು , 2026-27 ನೇ ಆರ್ಥಿಕ ವರ್ಷದ ಬಜೆಟ್ ಗಾತ್ರ 4,48,0004 ಕೋಟಿ ರೂ. , 2025-26 ಕ್ಕೆ ಬಜೆಟ್ ಗಾತ್ರ 4,09,549 ಕೋಟಿ ರೂ. ವಿತ್ತು. ಕಳೆದ ವರ್ಷಕ್ಕಿಂತ  ಈ ಬಾರಿಯ ಬಜೆಟ್ 38455 ಕೋಟಿ ರೂ., ಶೇ. 9.4 ರಷ್ಟಾಗಿದ್ದು, ಇದು ಆರ್ಥಿಕ ಪ್ರಗತಿಯನ್ನು ಸೂಚಿಸುತ್ತಿದೆ. ಆರ್ಥಿಕ ಹಿಂಜರಿತವಿದಿದ್ದರೆ, ಈ ಪ್ರಗತಿ ಸಾಧ್ಯವಾಗುತ್ತಿರಲಿಲ್ಲ.

ಇದನ್ನು ಕೇಂದ್ರಕ್ಕೆ ಹೋಲಿಸಿದರೆ , 26-27ರಲ್ಲಿ 53, 47,000 ಕೋಟಿ ಇದೆ. ಪ್ರಗತಿ 5.6% ರಷ್ಟಿದೆ. ಕರ್ನಾಟಕದ ಜಿಡಿಪಿಯು 2026-27 ಕ್ಕೆ 33,05,500 ಕೋಟಿ (8.1% ಪ್ರಗತಿ), ದೇಶದ ಜಿಡಿಪಿಯಲ್ಲಿ ಪ್ರಗತಿ 7.4% ರಷ್ಟು ಮಾತ್ರ. ದೇಶದ ಆರ್ಥಿಕ ಬೆಳವಣಿಗೆಗಿಂತ , ರಾಜ್ಯದ ಆರ್ಥಿಕತೆ ಬೆಳವಣಿಗೆ ಹೆಚ್ಚಿದೆ.

ವಿತ್ತೀಯ ಕೊರತೆ ಶೇ. 3 ರೊಳಗಿರಬೇಕು, ಒಟ್ಟು ಸಾಲ 25 %ರ ಜಿಡಿಪಿಯನ್ನು ಮೀರಬಾರದು ಎಂಬ ಆರ್ಥಿಕ ಶಿಸ್ತನ್ನು ತರಲು ಮಾನದಂಡಗಳನ್ನು ರಾಜ್ಯ ಸರ್ಕಾರ ಪೂರೈಸಿದೆ. ವಿತ್ತೀಯ ಕೊರತೆ 2.95 ರೊಳಗಿದ್ದು, ಸಾಲದ ಮೊತ್ತ 24.94% ರಷ್ಟಿದ್ದು, ಇದು 25 % ನ ಮಿತಿಯೊಳಗೆ ಇದೆ.  ಬಜೆಟ್ ನಲ್ಲಿ ರೆವಿನ್ಯೂ ಸರ್ಪ್ಲಸ್  ಆಗದೇ ವಿತ್ತೀಯ ಕೊರತೆಯಾಗಿದೆ. ಇದಕ್ಕೂ ಪೂರಕ ಕಾರಣಗಳಿವೆ. ವಾಸ್ತವನ್ನು ತಿಳಿಸಲಾಗುತ್ತಿದೆಯೇ ಹೊರತು ಯಾರನ್ನೂ ದಾರಿ ತಪ್ಪಿಸುತ್ತಿಲ್ಲ. ಆದ್ದರಿಂದ ನಮ್ಮ ಆಯವ್ಯಯ, ಆರ್ಥಿಕ ಹೊಣೆಗಾರಿಕೆಯ ಮಾನದಂಡಗಳನ್ನು ಪಾಲಿಸಿದೆ.

ನಾನು ಮಂಡಿಸಿದ 17 ಆಯವ್ಯಯದಲ್ಲಿಯೂ ಆರ್ಥಿಕ ಶಿಸ್ತನ್ನೂ ಪಾಲಿಸಲಾಗಿದೆ. ಜನರಿಗೆ ಸಾಮಾಜಿಕ ನ್ಯಾಯ ನೀಡಿ, ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವುದು ಮುಖ್ಯ. ನಾವು ಅಧಿಕಾರದಲ್ಲಿದ್ದು, ಜನರಿಗೆ ಮಾಡು ಒಳಿತು ಅತ್ಯಂತ ಮುಖ್ಯವಾಗಿದೆ. ಮಹಿಳೆಯರು, ರೈತರು, ಕಾರ್ಮಿಕರು, ಹಿಂದುಳಿದವರು , ದೀನದಲಿತರಿಗೆ ಶಕ್ತಿ ತುಂಬಿರುವುದು ಮುಖ್ಯ.

ಡಾ.ಬಿ.ಆರ್.ಅಂಬೇಡ್ಕರ್ ಅವರು, ಸ್ವಾತಂತ್ರ್ಯ ಯಶಸ್ವಿಯಾಗಲು ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರೆಯಬೇಕೆಂದು ತಿಳಿಸಿದ್ದು, ಆಗ ಮಾತ್ರ  ಸ್ವಾತಂತ್ರ್ಯ ಯಶಸ್ವಿಯಾಗುತ್ತದೆ ಎಂದು ತಿಳಿಸಿದ್ದರು. ಅಲ್ಲದೇ, ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದು, ಅಸಮಾನತೆಯನ್ನು ತೊಲಗಿಸದೇ, ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದಿದ್ದರು.

ದಕ್ಷಿಣ ಭಾರತದ ನಮ್ಮ ಸುತ್ತ ಮುತ್ತಲ ಪ್ರಗತಿಶೀಲ ರಾಜ್ಯಗಳಿಗೆ ಹೋಲಿಕೆ ಮಾಡಿದರೂ ಸಹ ನಮ್ಮ ವಿತ್ತೀಯ ಕೊರತೆಯ ಪ್ರಮಾಣ ನಿಗಧಿತ ಮಟ್ಟದ ಒಳಗೇ ಇದೆ. 2025-26 ಪರಿಷ್ಕೃತ ಅಂದಾಜಿನಲ್ಲೂ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟು ಇರಲಿದೆ. ಮಹಾರಾಷ್ಟçದಲ್ಲಿ ಶೇ.3.0 ರಷ್ಟು, ಆಂಧ್ರಪ್ರದೇಶ ಶೇ.4.5, ಕೇರಳ ಶೇ.3.8, ತಮಿಳುನಾಡು ಶೇ.3.5 ರಷ್ಟು ಇರಲಿde

ವಾಸ್ತವವಾಗಿ ರೆವೆನ್ಯೂ ಡಿಫಿಸಿಟ್ ಇರಬಾರದು. ಆದರೆ ಕೇಂದ್ರ ಸರ್ಕಾರ ಒಳಗೊಂಡAತೆ ಮಹಾರಾಷ್ಟç ಹಾಗೂ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲೂ ರೆವೆನ್ಯೂ ಡಿಫಿಸಿಟ್ ಇದೆ. ಅದರಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳದ್ದೇ ಕಡಿಮೆ ಇದೆ.

ವಿರೋಧ ಪಕ್ಷದ ವಿಜಯೇಂದ್ರ ಮುಂತಾದವರು ರೆವಿನ್ಯೂ ಸರಿಯಾಗಿ ಸಂಗ್ರಹವಾಗದ ಕಾರಣ  ಪ್ರತಿ ವರ್ಷ ಬಜೆಟ್ಟನ್ನು ಪರಿಷ್ಕರಿಸುತ್ತಿದ್ದಾರೆ  ಎಂದು  ಆರೋಪಿಸಿದ್ದಾರೆ.

ಆಯವ್ಯಯ ಅಂದಾಜಿಗೆ ಹೋಲಿಸಿದರೆ ಪಕ್ಕದ ರಾಜ್ಯಗಳ ಸ್ವಂತ ರಾಜಸ್ವ ಸಂಗ್ರಹಣೆಯು ವಾಸ್ತವ/ಪರಿಷ್ಕೃತ ಸಂಗ್ರಹಣೆಯಲ್ಲಿ ಕಡಿಮೆ ಆಗಿದೆ.

ಕರ್ನಾಟಕ ರಾಜ್ಯದ್ದೊಂದೆ ಸಮಸ್ಯೆಯಲ್ಲ. ಕೇಂದ್ರ ಸರ್ಕಾರದ ಅಪಕ್ವ ಆರ್ಥಿಕ ನೀತಿಗಳಿಂದ ಉಂಟಾಗುತ್ತಿರುವ ಸಮಸ್ಯೆಯಾಗಿದೆ.  ಆದರೆ ನಮ್ಮ ಅಕ್ಕ ಪಕ್ಕದ ರಾಜ್ಯಗಳಿಗೆ ಹೋಲಿಸಿದರೂ ಸಹ ನಮ್ಮ ಸ್ವಂತ ರಾಜಸ್ವ ಸಂಗ್ರಹ ಉತ್ತಮವಾಗಿದೆ.

ಕೇಂದ್ರ ಸರ್ಕಾರದವರು ಕಳೆದ ವರ್ಷ ವರ್ಷದ ಮಧ್ಯ ಭಾಗದಲ್ಲಿ ಇದ್ದಕ್ಕಿದ್ದಂತೆ ಜಿಎಸ್‌ಟಿ ದರಗಳನ್ನು ತರ್ಕಬದ್ಧಗೊಳಿಸುತ್ತೇವೆಂದು ಹೇಳಿ ಪರಿಷ್ಕರಣೆ ಮಾಡಿದ ಕಾರಣಕ್ಕೆ ರಾಜ್ಯದ ಆರ್ಥಿಕತೆಯ ಮೇಲೆ ಹೊಡೆತ ಬಿತ್ತು. 2025-26ನೇ ಸಾಲಿನಲ್ಲಿ ಜಿ.ಎಸ್.ಟಿ ತರ್ಕಬದ್ಧಗೊಳಿಸುವಿಕೆಗೂ ಮುನ್ನ, ರಾಜ್ಯದ ಸರಾಸರಿ ಮಾಸಿಕ ಜಿ.ಎಸ್.ಟಿ ರಾಜಸ್ವ ಸಂಗ್ರಹಣೆಯು ಶೇ.10ರಷ್ಟು ಬೆಳವಣಿಗೆಯನ್ನು ದಾಖಲಿಸಿತ್ತು. ಆದರೆ ದರ ತರ್ಕಬದ್ಧಗೊಳಿಸುವಿಕೆಯ ನಂತರ, ಜಿ.ಎಸ್.ಟಿ ಸಂಗ್ರಹಣೆಯ ಮಾಸಿಕ ಬೆಳವಣಿಗೆಯು ಶೇ.4ಕ್ಕೆ ಕಡಿಮೆಯಾಗಿದೆ. 2025-26ನೇ ಸಾಲಿನಲ್ಲಿ ಸುಮಾರು 10,000 ಕೋಟಿ ಕೊರತೆಯಾದರೆ 26-27ರಲ್ಲಿ 15,000 ಕೋಟಿ ರೂ.ಗಳಷ್ಟು ಕೊರತೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಕಾರಣದಿಂದಾಗಿ 2025-26ರ ಪರಿಷ್ಕೃತ ಅಂದಾಜಿನಲ್ಲಿ ಅಂದಾಜಿನಲ್ಲಿ ರಾಜಸ್ವ ಕೊರತೆಯಷ್ಟು 22,957 ಕೋಟಿ ರೂಗಳಷ್ಟು ರಾಜಸ್ವ ಕೊರತೆಯಾಗಿರುತ್ತದೆ.

ಹೋಗಲಿ, ಜಿಎಸ್‌ಟಿ ದರ ಪರಿಷ್ಕರಣೆಯಿಂದ ಜನರಿಗೆ ಹೆಚ್ಚಿನ ಲಾಭ ದೊರೆಯಿತೆ?  ಎಂದು ನೋಡಿದರೆ ಅದೂ ಇಲ್ಲ. ಕಾರು, ಬೈಕುಗಳ ಬೆಲೆ ತುಸು ಕಡಿಮೆಯಾಗಿದ್ದು ಬಿಟ್ಟರೆ ಬೇರೇನೂ ಆಗಲಿಲ್ಲ. ಇತ್ತ ಜನರಿಗೂ ಇಲ್ಲ. ಜನ ಕಲ್ಯಾಣಕ್ಕೂ ಇಲ್ಲ. ಲಾಭಾಂಶವನ್ನು ಬಹುರಾಷ್ಟಿçÃಯ ಕಂಪೆನಿಗಳು, ಕಾರ್ಪೊರೇಟ್ ಕುಳಗಳು ಹೊತ್ತುಕೊಂಡು ಹೋಗುತ್ತಿವೆ. ಇಷ್ಟರ ನಡುವೆಯೂ ಕಳೆದ ವರ್ಷದ ಆಯವ್ಯಯಕ್ಕಿಂತ ಸುಮಾರು 22,573 ಕೋಟಿ ರೂ. ಹೆಚ್ಚಿನ ರೆವಿನ್ಯೂ ಸಂಗ್ರಹವಾಗಬಹುದೆAದು ಅಂದಾಜಿಸಿದ್ದೇವೆ. 2.92 ಲಕ್ಷ ಕೋಟಿ ರೂ.ಗಳಷ್ಟಿದ್ದ ಕಳೆದ ವರ್ಷದ ಅಂದಾಜು ಈ ವರ್ಷ 3.15 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಲಿದೆಯೆಂದು ಅಂದಾಜು ಮಾಡಿದ್ದೇವೆ.

ರಾಜ್ಯದ ತೆರಿಗೆ ಹಂಚಿಕೆಯ ಪಾಲು 14ನೇ ಹಣಕಾಸು ಆಯೋಗದ ಶಿಫಾರಸ್ಸು ಶೇ.4.713 ರಿಂದ 15ನೇ ಹಣಕಾಸು ಆಯೋಗದ ಶಿಫಾರಸ್ಸು ಶೇ.3.647ಕ್ಕೆ ಇಳಿಕೆಯಾಗಿದ್ದು, ಹಿಂದಿನ ಆಯೋಗದ ಶಿಫಾರಸ್ಸಿಗೆ ಹೋಲಿಸಿದರೆ ಶೇ.23ರಷ್ಟು ಕಡಿಮೆಯಾಗಿದೆ. ರಾಜ್ಯಗಳಿಗೆ ನ್ಯಾಯಯುತ ತೆರಿಗೆ ಹಂಚಿಕೆ ಮಾಡಲು ಸಮಾನತೆ ಮತ್ತು ಬೆಳವಣಿಗೆ ಎರಡಕ್ಕೂ ಪ್ರಾಮುಖ್ಯತೆ ನೀಡುವ ಸೂತ್ರವನ್ನು ಶಿಫಾರಸ್ಸು ಮಾಡಬೇಕು ಎಂದು ರಾಜ್ಯವು 16ನೇ ಹಣಕಾಸು ಆಯೋಗಕ್ಕೆ ಮನವಿ ಮಾಡಿತ್ತು. 16ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ಶೇ.4.131 ರಷ್ಟು ತೆರಿಗೆ ಪಾಲನ್ನು ಶಿಫಾರಸ್ಸು ಮಾಡಿದೆ. ಇದು 15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ ಪಾಲಿಗಿಂತ ಶೇ.13 ರಷ್ಟು ಹೆಚ್ಚಳವಾಗಿದ್ದು, ನಮ್ಮ ಬೇಡಿಕೆಯನ್ನು ಭಾಗಶಃ ಪರಿಗಣಿಸಿದಂತಾಗಿದೆ. ಆದರೆ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಪಾಲು ಸಿಗಲಿಲ್ಲ.

ಬಿಜೆಪಿ ಸರ್ಕಾರದ ಅವಧಿಯಲ್ಲಿ Surplus budget ಮಾಡಿದ್ದೇವೆ. ನಿಮ್ಮದು Deficit budget ರಾಜಸ್ವ ಕೊರತೆಯ ಬಜೆಟ್ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ.

ನಾನು 2000 ನೇ ಇಸವಿಯಿಂದಲೂ ರಾಜ್ಯದ ಎಲ್ಲ ಬಜೆಟ್‌ಗಳನ್ನು ನೋಡಿದ್ದೇನೆ. ಎಲ್ಲ ಬಜೆಟ್‌ಗಳಲ್ಲೂ ಫಿಸ್ಕಲ್ ಡಿಫಿಸಿಟ್ ಇದ್ದೇ ಇತ್ತು.  ನಿಮ್ಮ ನಾಲ್ಕು ವರ್ಷಗಳ ಅವಧಿಯಲ್ಲೂ ಫಿಸ್ಕಲ್ ಡಿಫಿಸಿಟ್ ಇತ್ತು.

.ಎಸ್.ಟಿ. ಪರಿಹಾರ ಒಟ್ಟಿಗೆ ಬಿಡುಗಡೆ ಕಾರಣ ಸರ್ಪ್ಲಸ್ ಆಯಿತು.​

ಈ ಯಾವ ವಿಚಾರಗಳು ಗೊತ್ತಿಲ್ಲದೆ ವಿರೋಧ ಪಕ್ಷದ ಸದಸ್ಯರು ಮಾತನಾಡುತ್ತಾರೆ.

ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದಲ್ಲಿ ಸೂಚಿಸಿರುವಂತೆ ರಾಜ್ಯವು ರಾಜಸ್ವ ಹೆಚ್ಚುವರಿಯನ್ನು ಕಾಯ್ದುಕೊಂಡು ಬಂದಿರುತ್ತದೆ. ಆದರೆ, ಜಿ.ಎಸ್.ಟಿ. ಜಾರಿಯಿಂದ ರಾಜ್ಯಕ್ಕೆ ಆದ ರಾಜಸ್ವ ನಷ್ಟವನ್ನು ಸಂಪೂರ್ಣವಾಗಿ ಸರಿದೂಗಿಸಲು ಕೇಂದ್ರ ಸರ್ಕಾರ ವಿಫಲವಾದ ಕಾರಣ ಮತ್ತು ಕೇಂದ್ರ ಸರ್ಕಾರ ವಿಧಿಸುವ ಸೆಸ್‌ಗಳು ಮತ್ತು ಸರ್‌ಚಾರ್ಜ್ಗಳನ್ನು ರಾಜ್ಯಗಳಿಗೆ ಹಂಚಿಕೆಯಾಗುವ ತೆರಿಗೆ ಪಾಲಿನಲ್ಲಿ ಪರಿಗಣಿಸದಿರುವುದರಿಂದ ಹಾಗು 15ನೇ ಹಣಕಾಸಿನಲ್ಲಿ ರಾಜ್ಯದ ತೆರಿಗೆ ಪಾಲು ಕಡಿಮೆಯಾದ ಕಾರಣ ರಾಜ್ಯವು ವಿತ್ತೀಯ ಸವಾಲುಗಳನ್ನು ಎದುರಿಸುವಂತಾಯಿತು. ಕೇಂದ್ರ ಸರ್ಕಾರ 2023-24ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳಿಸಿದ್ದರಿಂದ, ಕೇಂದ್ರ ಸರ್ಕಾರ ಅಂದಾಜಿಸಿದ್ದ ಜಿ.ಎಸ್.ಟಿ. ಸಂಗ್ರಹಣೆಗೆ (Protected Revenue) ಹೋಲಿಸಿದರೆ, ರಾಜ್ಯದ ಜಿ.ಎಸ್.ಟಿ ಸಂಗ್ರಹಣೆಯು 2023-24ರಲ್ಲಿ 30,871 ಕೋಟಿ ರೂ.ಗಳು ಮತ್ತು 2024-25ರಲ್ಲಿ 40,368 ಕೋಟಿ ರೂ.ಗಳು ಕೊರತೆಯಾಗಿರುತ್ತದೆ. 15ನೇ ಹಣಕಾಸಿನಲ್ಲಿ ರಾಜ್ಯದ ತೆರಿಗೆ ಪಾಲು ಕಡಿಮೆಯಾದ ಕಾರಣ 2023-24ರಿಂದ 2025-26ರವರೆಗೆ 39,500 ಕೋಟಿ ರೂ.ಗಳು ನಷ್ಟವಾಗಿರುತ್ತದೆ. ಇದರ ಪರಿಣಾಮವಾಗಿ, 2023-24ರಿಂದ ರಾಜಸ್ವ ಕೊರತೆಯನ್ನು ಎದುರಿಸುವಂತಾಯಿತು.

ಬಿಜೆಪಿ ಸರ್ಕಾರದ ಅವಧಿಯಲ್ಲಿ (2019-2022) ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರ ನೀಡಿರುತ್ತದೆ. ಈ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ಒಟ್ಟು ಪರಿಹಾರ 57,351 ಕೋಟಿ ರೂ.ಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ, 2023ರಿಂದ ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರ ನೀಡುವುದನ್ನು ನಿಲ್ಲಿಸಿರುತ್ತದೆ. ಆದಕಾರಣ ರಾಜ್ಯದ ರಾಜಸ್ವ ಸಂಗ್ರಹಣೆ ಕಡಿಮೆಯಾಗಿ ರಾಜಸ್ವ ಕೊರತೆಯನ್ನು ಎದುರಿಸಬೇಕಾಯಿತು.

2017ರಲ್ಲಿ ಜಿಎಸ್‌ಟಿ ಜಾರಿಯಾದಾಗಿನಿಂದ, 15ನೇ ಹಣಕಾಸು ಆಯೋಗ ಮಾಡಿದ ಅನ್ಯಾಯದಿಂದ, 15ನೇ ಹಣಕಾಸು ಆಯೋಗ ಮಾಡಿದ ಶಿಫಾರಸ್ಸುಗಳನ್ನು ಜಾರಿ ಮಾಡದೆ   ಕೇಂದ್ರವು ಮಾಡಿದ ದ್ರೋಹದಿಂದ, ಜಿಎಸ್‌ಟಿ ಪರಿಹಾರ ಸಿಗದೆ ನೀಡದ ಕಾರಣ ಸುಮಾರು 2,00,000 ಕೋಟಿ ರೂ.ಗಳಿಗೂ ಹೆಚ್ಚಿನ ನಷ್ಟ ರಾಜ್ಯಕ್ಕೆ ಉಂಟಾಗಿದೆ. ಪರಿಸ್ಥಿತಿ ಹೀಗಾದರೆ ರಾಜ್ಯಗಳ ಆರ್ಥಿಕತೆ ಹೇಗೆ ಉಳಿಯುತ್ತದೆ? ಇಷ್ಟೆಲ್ಲದರ ನಡುವೆಯೂ ನಮ್ಮ ರಾಜ್ಯವನ್ನು ನಾವು ಮುನ್ನಡೆಸುತ್ತಿದ್ದೇವೆ. ಗ್ಯಾರಂಟಿಯAಥ ಜನ ಕಲ್ಯಾಣ ಯೋಜನೆಗಳಿಗಾಗಿ ನಯಾಪೈಸೆ ಖರ್ಚು ಮಾಡದ ಗುಜರಾತ್ ರಾಜ್ಯವು ಈ ಬಾರಿ 1,00,000 ಕೋಟಿ ರೂಗಳಷ್ಟು ಸಾಲ ಮಾಡುತ್ತಿದೆ.

ಇಲ್ಲಿ ತಮಗೆ  ಅರ್ಥವಾಗಿರಬಹುದು, ರಾಜಸ್ವ ಕೊರತೆಯು 3-4 ಕಾರಣಗಳಿಂದ ರಾಜಸ್ವ ಕೊರತೆಯ ಸಮಸ್ಯೆ ಉಂಟಾಗಿರುತ್ತದೆ.  15 ನೇ ಹಣಕಾಸು ಆgಯೋಗವು ಕಡಿಮೆ ಹಂಚಿಕೆ ಮಾಡಿತು,  ಆಯೋಗವು ಶಿಫಾರಸು ಮಾಡಿದ ಅನುದಾನಗಳನ್ನು ಕೇಂದ್ರ ಸರ್ಕಾರ ಕೊಡದೆ ವಂಚಿಸಿತು. ಜಿಎಸ್‌ಟಿ ಪರಿಹಾರ ನಿಲ್ಲಿಸಲಾಯಿತು, ಜಿಎಸ್‌ಟಿ ದರಗಳ ಪರಿಷ್ಕರಣೆ, ಜೆಜೆಎಂ ಮುಂತಾದ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಕೊಡದೆ ಅನ್ಯಾಯ ಮಾಡಿದ ಕಾರಣ ರಾಜಸ್ವ ಕೊರತೆಯ ಸಮಸ್ಯೆ ಉದ್ಭವಿಸಿತು.

Key words: CM Siddaramaiah, budget, Session

The post ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ: ಪ್ರಮುಖ ಅಂಶಗಳು ಹೀಗಿವೆ ನೋಡಿ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനെതിരെയുള്ള യുദ്ധം വിനാശകരമായ തെറ്റ്; ട്രംപിനെതിരെ രൂക്ഷ വിമർശനവുമായി ജർമൻ പ്രസിഡന്റ്

ബെർലിൻ: ഇറാനെതിരായുള്ള യുദ്ധം അന്താരാഷ്ട്ര നിയമങ്ങളുടെ ലംഘനമാണെന്നും അതൊരു വിനാശകരമായ തെറ്റാണെന്നും...

“ `இந்த' தேவைக்கு `இதனுடன்' ரூ.50,000-க்கு மேல் எடுத்துச் செல்லலாம்!" – தலைமை தேர்தல் அதிகாரி

தமிழ்நாடு சட்டமன்றத் தேர்தலை முன்னிட்டு, இன்று தமிழ்நாடு தலைமை தேர்தல் அதிகாரி...

ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು,ಮಾರ್ಚ್,25,2026 (www.justkannada.in):  ದೇಶದಲ್ಲಿ LPG ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ...