ಬೆಂಗಳೂರು,ಏಪ್ರಿಲ್,7,2026 (www.justkannada.in): ಅಸ್ಸಾಂ ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ, ಆರ್ ಎಸ್ ಎಸ್ ವಿರುದ್ದ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ (DGP) ರಾಜ್ಯ ಬಿಜೆಪಿ ದೂರು ನೀಡಿದೆ.
ಶಾಸಕರಾದ ಎಸ್. ಮುನಿರಾಜು, ಸಿ.ಕೆ. ರಾಮಮೂರ್ತಿ, ಧೀರಜ್ ಮುನಿರಾಜು, ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ ಸೇರಿದಂತೆ ಹಲವು ಬಿಜೆಪಿ ಮುಖಂಡರ ನಿಯೋಗವು ಇಂದು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ದೂರು ನೀಡಿದ್ದಾರೆ.
ದೂರಿನಲ್ಲಿ ಖರ್ಗೆ ಅವರ ಭಾಷಣದ ತುಣುಕನ್ನು ಉಲ್ಲೇಖಿಸಿದ್ದು, “ಕುರಾನ್‌ನಲ್ಲಿ ಬರೆದಿದೆ, ನಮಾಜ್ ಮಾಡುವ ಸಂದರ್ಭದಲ್ಲಿ ವಿಷ ಸರ್ಪ ಕಂಡರೆ ಅದನ್ನು ಕೊಲ್ಲಬೇಕು. ಆರ್.ಎಸ್.ಎಸ್/ಬಿಜೆಪಿ ಕೂಡ ಅದೇ ರೀತಿಯ ವಿಷಸರ್ಪಗಳು. ನೀವು ಅದನ್ನು ಕೊಲ್ಲದಿದ್ದರೆ ಬದುಕುವುದಿಲ್ಲ” ಎಂದು ಹೇಳುವ ಮೂಲಕ ಮುಸ್ಲಿಮರನ್ನು ಬಿಜೆಪಿ ಆರ್ ಎಸ್ ಎಸ್ ವಿರುದ್ದ ಎತ್ತಿಕಟ್ಟಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
Key words: BJP, complaint, against, AICC President, Mallikarjun Kharge
The post ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ನೀಡಿದ ಬಿಜೆಪಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





