ಬೆಂಗಳೂರು,ಏಪ್ರಿಲ್,8,2026 (www.justkannada.in): 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಬಸವೇಶ್ವರ ನಗರ ಠಾಣಾ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಬಂಧಿಸಿದ್ದಾರೆ. 2021 ರಲ್ಲಿ ವಾಟಾಳ್ ನಾಗರಾಜ್ ಅವರು ಶಾಸಕ ಸುರೇಶ್ ಕುಮಾರ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಜೆಎಂ ನ್ಯಾಯಾಲಯ ವಾಟಾಳ್ ನಾಗರಾಜ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು.
ಬಂಧನದ ವೇಳೆ ವಾಟಾಳ್ ನಾಗರಾಜ್ ಅವರು ಇಂಗ್ಲಿಷ್ ನಲ್ಲಿ ವಾರೆಂಟ್ ತಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕನ್ನಡದಲ್ಲಿ ವಾರೆಂಟ್ ಕೊಟ್ಟರೆ ಮಾತ್ರ ಬರುತ್ತೇನೆ ಇಲ್ಲದಿದ್ದರೆ ಬರುವುದಿಲ್ಲ ಎಂದು ಪಟ್ಟು ಹಿಡಿದು ಪೊಲೀಸ್ ವಾಹನ ಹತ್ತಲು ನಿರಾಕರಿಸಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಆಟೋದಲ್ಲಿ ಕೋರ್ಟ್‌ಗೆ ಕರೆದುದೊಯ್ದರು.
Key words: Kannada activist, Vatal Nagaraj, arrested
The post ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





