ದಾವಣಗೆರೆ/ಬಾಗಲಕೋಟೆ,ಏಪ್ರಿಲ್,9,2026 (www.justkannada.in): ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತದಾನ ಇಂದು ನಡೆದಿದ್ದು ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಂಜೆ 5ಗಂಟೆ ವೇಳೆಗೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ 65.68 ರಷ್ಟು ಮತದಾನವಾದರೆ ದಾವಣಗೆರೆ ದಕ್ಷಿಣದಲ್ಲಿ ಶೇ 63.04 ರಷ್ಟು ಮತದಾನವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ನಡೆದಿದ್ದು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಎರಡೂ ಕ್ಷೇತ್ರಗಳಲ್ಲೂ ಜಿದ್ದಾಜಿದ್ದಿನ ಪೈಪೋಟಿ ಇದ್ದು ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮತ್ತು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ ಮಠ ಕಣದಲ್ಲಿದ್ದು ಮೇ 4 ರಂದು ಇವರ ಸೋಲು ಗೆಲುವಿನ ಭವಿಷ್ಯ ನಿರ್ಧಾರವಾಗಲಿದೆ.
Key words: By-election, voting, two constituencies
The post ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





