ಬೆಂಗಳೂರು,ಏಪ್ರಿಲ್,11,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಷಡ್ಯಂತ್ರ ಆರೋಪ ಕೇಳಿ ಬಂದಿದ್ದು, ಚುನಾವಣೆ ಮುಗಿದ ಬೆನ್ನಲ್ಲೆ ಅಸಮಾಧಾನ ವ್ಯಕ್ತವಾಗಿದೆ.
ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಅಬ್ದುಲ್ ಜಬ್ಬಾರ್ ರಾಜೀನಾಮೆ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು.
ತಮ್ಮದೇ ನಾಯಕರ ವಿರುದ್ದ ಅಲ್ಪಸಂಖ್ಯಾತ ಮುಖಂಡರ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಈಗ ನಾನು ಏನು ಮಾತನಾಡಲ್ಲ ನನಗೂ ಕೆಲ ರಿಪೋರ್ಟ್ ಬಂದಿದೆ. ಸ್ಥಳೀಯ ನಾಯಕರಿಂದಲೂ ಈ ಸಂಬಂಧ ವರದಿ ತರಿಸಿಕೊಳ್ಳುತ್ತೇನೆ. ವರದಿ ಪಡೆದ ಬಳಿಕ ಮಾತನಾಡುತ್ತೇನೆ ಎಂದರು.
Key words: Abdul Jabbar, resigns , KPCC minority unit president, DCM, DK Shivakumar
The post KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





