ಮುಂಬೈ,ಏಪ್ರಿಲ್,13,2026 (www.justkannada.in): ನಿನ್ನೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆಯು ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ಇಂದು ಸಂಜೆ 4 ಗಂಟೆ ವೇಳೆಗೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ನೆರವೇರಿದೆ. ಅಂತ್ಯಕ್ರಿಯೆ ವೇಳೇ ಅಶಾಭೋಸ್ಲೆ ಅವರಿಗೆ ಕುಶಾಲತೋಪು ಸಿಡಿಸಿ ಗೌರವ ವಂದನೆ ಸಲ್ಲಿಸಲಾಯಿತು.
ಅಂತ್ಯಕ್ರಿಯೆ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಸುನೇತ್ರಾ ಪವಾರ್ ಸೇರಿ ಹಲವು ರಾಜಕೀಯ ಗಣ್ಯರು ಉಪಸ್ಥಿತರಿದ್ದರು.
Key words: Famous singer, Asha Bhosle, Funeral
The post ಖ್ಯಾತ ಗಾಯಕಿ ಆಶಾ ಭೋಸ್ಲೆ ಪಂಚಭೂತಗಳಲ್ಲಿ ಲೀನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





