15
April, 2026

A News 365Times Venture

15
Wednesday
April, 2026

A News 365Times Venture

ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ-ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಏಪ್ರಿಲ್ 14,2026 (www.justkannada.in): ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಇಂದು ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾII ಬಿ ಆರ್ ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ರವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು  ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಾಬಾಸಾಹೇಬ್ ಅಂಬೇಡ್ಕರ್ ರವರು ಕೇವಲ ದಲಿತರಿಗೆ ಮಾತ್ರವಲ್ಲದೇ, ಇಡೀ ಜಗತ್ತಿನ ನಾಯಕರಾಗಿದ್ದರು. ಭಾರತಕ್ಕೆ ಅತ್ಯಂತ  ಯೋಗ್ಯವಾದ ಸಂವಿಧಾನ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.  1950 ಜನವರಿ 26 ರಂದು ಭಾರತದ ಸಂವಿಧಾನ ಜಾರಿಗೆ ಬರಲಿದ್ದು, ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡಲಿದ್ದೇವೆ. ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಲಭಿಸಿದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಫಲಿಸುತ್ತದೆ ಎಂದಿದ್ದರು. ಒಬ್ಬ ವ್ಯಕ್ತಿ , ಒಂದು ವೋಟು, ಒಂದು ಮೌಲ್ಯ ಎಂದು ಸಂವಿಧಾನ ತಿಳಿಸಿದ್ದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವಗಳ ಮೇಲೆ ಸಂವಿಧಾನ ನಿಂತಿದೆ. ಸಂವಿಧಾನ ಜಾರಿಯಾಗಿ 76 ವರ್ಷಗಳು ಕಳೆದರೂ ಸಮಾಜದಲ್ಲಿನ ಅಸಮಾನತೆ ಹೋಗಿಲ್ಲ ಎಂದರು.

ಬಿಜೆಪಿ-ಆರ್ ಎಸ್ ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ

ಅಂದು ಆರ್ ಎಸ್ ಎಸ್ ನ ಮುಖವಾಣಿಯಾಗಿದ್ದ ಆರ್ಗನೈಸರ್ ಪತ್ರಿಕೆಯಲ್ಲಿ ಸಂವಿಧಾನವನ್ನು ವಿರೋಧಿಸಿದ್ದರು. ಆದರೆ ಈಗ ಆರ್ ಎಸ್ ಎಸ್ –ಬಿಜೆಪಿಯವರು ಅಂಬೇಡ್ಕರ್ ರವರನ್ನು ಹೊಗಳುತ್ತಿದ್ದಾರೆ. ಅವರ ಸೋಲಿಗೆ ಕಮ್ಯುನಿಷ್ಟ್ ಪಕ್ಷದ ಎಸ್.ಎ.ಡಾಂಗೆ ಮತ್ತು ಹಿಂದುತ್ವ ನಾಯಕ ವಿ.ಡಿ.ಸಾರ್ವರ್ಕರ್ ರವರು ಕಾರಣರಾಗಿದ್ದರು ಎಂದು ಅಂಬೇಡ್ಕರ್ ರವರು ಬರೆದುಕೊಂಡಿದ್ದಾರೆ. ಆದರೆ ಚುನಾವಣೆಯಲ್ಲಿ ಅಂಬೇಡ್ಕರ್ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಾರೆ. ಬಿಜೆಪಿಯವರು ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಾಗಲೀ ಅಥವಾ ಸಂವಿಧಾನದ ಪರವಾಗಿರಲಿಲ್ಲ. ಆರ್ ಎಸ್ ಎಸ್ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಆರ್ ಎಸ್ ಎಸ್ ಹೆಡ್ಗೆವಾರ್ ಅವರು ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ ಎಂದರು.

ಸಂವಿಧಾನ ನೀಡಿದ ಶಕ್ತಿಯಿಂದಲೇ ನಾನಿಂದು  ಮುಖ್ಯಮಂತ್ರಿಯಾಗಿದ್ದೇನೆ

ಭಾರತದ ಅಭಿವೃದ್ಧಿಯಲ್ಲಿ ಆರ್ ಎಸ್ ಎಸ್, ಬಿಜೆಪಿಯ ಕೊಡುಗೆಯಿಲ್ಲ. ದೇಶಕ್ಕೆ ಸ್ವಾತಂತ್ರ್ಯದ ಲಭಿಸುವ ಮುಂಚಿತವಾಗಿ ಮನುಸ್ಮೃತಿ ಜಾರಿಯಲ್ಲಿತ್ತು. ಚತುವರ್ಣ ವ್ಯವಸ್ಥೆಯನ್ನು ಹೋಗಲಾಡಿಸಲು ಡಾ.ಬಿ.ಆರ್.ಅಂಬೇಡ್ಕರ್ ರವರು ಹೋರಾಡಿದರು. ಹಿಂದೂಧರ್ಮದಲ್ಲಿದ್ದಂತಹ ಅಸ್ಪಷ್ಠತೆಗಳನ್ನು ಸುಧಾರಿಸಲು ಬಹಳ ಪ್ರಯತ್ನಿಸಿ, ಮನುಶಾಸ್ತ್ರವನ್ನು ಸುಟ್ಟರು. ಅವರು ಬಾಲ್ಯದಿಂದಲೇ ಅಸ್ಪೃಶ್ಯತೆಯ ಕರಾಳ ಅನುಭವ ಹೊಂದಿದ್ದ ಕಾರಣ, ದೀನ ದಲಿತರಿಗೆ ಸಮಾನ ಅವಕಾಶಗಳನ್ನು  ನೀಡಲು ಪ್ರಯತ್ನಿಸಿದರು. ಎಲ್ಲ ಶೋಷಿತ ವರ್ಗದವರಿಗೂ ಸಮಾನ ಶಿಕ್ಷಣದ ಹಕ್ಕನ್ನು ಸಂವಿಧಾನ ನೀಡಿತು. ಸಂವಿಧಾನದ ಶಕ್ತಿಯಿಂದಲೇ ತಾನು ಇಂದು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಶಿಕ್ಷಣದಿಂದ ಸಂಕೋಲೆಗಳಿಂದ ಮುಕ್ತಿ

ಸಂವಿಧಾನದದಿಂದ ಸಾಮಾಜಿಕ ನ್ಯಾಯದ ರಥವನ್ನು ಮುಂದಕ್ಕೆ ಕೊಂಡೊಯ್ಯಬೇಕೆ ಹೊರತು ಹಿಂದಕ್ಕೆ ಎಳೆಯಬಾರದು. ಶಿಕ್ಷಣ, ಸಂಘಟನೆ ಮತ್ತು ಹೋರಾಟಗಳಿಂದ ಸಂವಿಧಾನದ ನೀಡಿದ ನ್ಯಾಯಬದ್ಧ ಹಕ್ಕುಗಳನ್ನು ಪಡೆಯಲು ಸಾಧ್ಯ.  ಶಿಕ್ಷಣದಿಂದ ಎಲ್ಲ ಸಂಕೋಲೆಗಳಿಂದ ಬಿಡುಗಡೆಗೊಳ್ಳಲು ಸಾಧ್ಯವಿದೆ. ಸಮಾಜದಲ್ಲಿನ ಜಡತ್ವವನ್ನು ಬಲಪಡಿಸುವ ಕೆಲಸದಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ತೊಡಗಿವೆ. ಕರ್ಮಸಿದ್ಧಾಂತವನ್ನು ವಿರೋಧಿಸಿದ ಅಂಬೇಡ್ಕರ್ ರವರು ಶಿಕ್ಷಣದಲ್ಲಿ ಮಾನವೀಯತೆ, ವೈಚಾರಿಕತೆ, ವೈಜ್ಞಾನಿಕತೆಯ ಮಹತ್ವವನ್ನು ತಿಳಿಸಿದ್ದರು. ಅಂಬೇಡ್ಕರ್ ರವರ  ಸಿದ್ದಾಂತಗಳಂತೆ ನಡೆದು, ಅವರ ಕನಸಿನ ಭಾರತವನ್ನು ಕಟ್ಟಲು ಎಲ್ಲರೂ ಶ್ರಮಿಸಬೇಕು ಎಂದರು.

Key words: Freedom, country, struggle, Congress, Ambedkar, CM Siddaramaiah

The post ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രിയെ തീരുമാനിക്കേണ്ടത് സോഷ്യല്‍ മീഡിയയല്ല; കോണ്‍ഗ്രസിലെ മുഖ്യമന്ത്രി ചര്‍ച്ചകള്‍ക്കെതിരെ മുതിര്‍ന്ന നേതാക്കള്‍

  കൊച്ചി: കോണ്‍ഗ്രസിനുള്ളിലെ മുഖ്യമന്ത്രി സ്ഥാനത്തെ ചൊല്ലിയുള്ള സോഷ്യല്‍ മീഡിയ ചര്‍ച്ചകള്‍ക്കെതിരെ...

VIP பணிகளுக்காக முடக்கப்பட்ட ஆம்புலன்ஸ்?: 'பறிபோன ஊடகவியலாளர் உயிர்' – பகீர் குற்றச்சாட்டு

மத்தியப் பிரதேசத்தில் 'ஸ்வர்ண் மங்கலம்' (Swarn Mangalam) என்ற மாத இதழின்...

PAKISTAN: ప్రపంచానికి మధ్యవర్తిగా బిల్డప్.. కానీ హోటల్ బిల్లులు కట్టలేని పరిస్థితి!

PAKISTAN: అమెరికా-ఇరాన్ మధ్య చర్చలకు వేదికగా పాకిస్తాన్ రాజధాని ఇస్లామాబాద్ మారింది....

ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್

ಮೈಸೂರು,ಏಪ್ರಿಲ್,14,2026 (www.justkannada.in): ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್...