1
May, 2026

A News 365Times Venture

1
Friday
May, 2026

A News 365Times Venture

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

Date:

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆ.ಎಸ್.ಡಿ.ಎಲ್) 2025-26ನೇ ಸಾಲಿನಲ್ಲಿ ಇದೇ ಮೊಟ್ಟಮೊದಲ ಬಾರಿಗೆ 2,016 ಕೋಟಿ ರೂ. ವಹಿವಾಟು ನಡೆಸಿ, 507 ಕೋಟಿ ರೂ. ನಿವ್ವಳ ಲಾಭ ದಾಖಲಿಸಿರುವುದು ಅಭೂತಪೂರ್ವ ಸಾಧನೆಯಾಗಿದೆ. ಇದರ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ದೂರಗಾಮಿ ಚಿಂತನೆಗಳಿಗೆ ಸಲ್ಲುತ್ತದೆ. ಇದಕ್ಕಾಗಿ ಅವರು ಅಭಿನಂದನಾರ್ಹರು ಎಂದು ಸರಕಾರಿ ಸಾಬೂನು ಕಾರ್ಖಾನೆ ಕಾರ್ಮಿಕರ ಸಂಘವು ಹೇಳಿದೆ.

ತಮ್ಮ ಅಧ್ಯಕ್ಷ ಮೈಕೇಲ್ ಫರ್ನಾಂಡಿಸ್ ನೇತೃತ್ವದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರನ್ನು ಇಲ್ಲಿನ ಅವರ ನಿವಾಸದಲ್ಲಿ ಭೇಟಿಯಾದ ಸಂಘದ ಪದಾಧಿಕಾರಿಗಳು ಸಚಿವರನ್ನು ಅಭಿನಂದಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಫರ್ನಾಂಡಿಸ್ ಅವರು, ಸಾಬೂನು ಕಾರ್ಖಾನೆಯು ತನ್ನ 110 ವರ್ಷಗಳ ಇತಿಹಾಸದಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಇದೇ ಮೊದಲ ಬಾರಿಗೆ 2 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ವಹಿವಾಟು ನಡೆಸಿದ್ದು, 47,494 ಮೆಟ್ರಿಕ್ ಟನ್ ಉತ್ಪಾದನೆ ದಾಖಲಿಸಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ. ಇದಕ್ಕೆ ಪಾಟೀಲರ ದೂರದೃಷ್ಟಿಯ ಚಿಂತನೆಯೇ ಕಾರಣವಾಗಿದೆ. ಇವರ ಜತೆಗೆ ಸಂಸ್ಥೆಯ ಅಧ್ಯಕ್ಷ ಸಿ.ಎಸ್ ಅಪ್ಪಾಜಿ ನಾಡಗೌಡರ ಕೊಡುಗೆಯೂ ಇದೆ. ಇದಕ್ಕೆ ಕಾರಣರಾಗಿರುವ ಸಚಿವರು, ಅಧ್ಯಕ್ಷರು, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು ಸಲ್ಲುತ್ತವೆ’ ಎಂದಿದ್ದಾರೆ.

ಕಾರ್ಖಾನೆಯಲ್ಲಿ ಮತ್ತಷ್ಟು ಉತ್ಪಾದನೆ ಹೆಚ್ಚಿಸಲು ಮತ್ತು ಮಾರುಕಟ್ಟೆ ವಿಸ್ತರಿಸಲು ಸಚಿವರು ಹಲವು ಹೊಸಹೊಸ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಇವುಗಳ ಯಶಸ್ಸಿಗೆ ಉದ್ಯೋಗಿಗಳ ಅಗತ್ಯವಿದೆ. ಆದರೆ ಈಗ ಸಿಬ್ಬಂದಿ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಸಂಸ್ಥೆಯಲ್ಲಿ ನೇರ ನೇಮಕಾತಿ ಮೂಲಕ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕು. ಇದರಿಂದ ಕಾರ್ಖಾನೆಯ ಸಾಧನೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿದೆ. ಈ ನಿಟ್ಟಿನಲ್ಲಿ ಸಚಿವ ಪಾಟೀಲರ ಸಹಕಾರ ಮತ್ತು ಸಲಹೆಗಳು ಅತ್ಯಗತ್ಯವಾಗಿವೆ ಎಂದು ಅವರು ಕಾರ್ಮಿಕರ ಸಂಘದ ಪರವಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ಹಲವು ಪದಾಧಿಕಾರಿಗಳು ಜೊತೆಯಲ್ಲಿದ್ದರು.

Key words: KSDL, achievement, Minister, M.B. Patil, workers union

The post KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

294ല്‍ 226ഉം നേടും, അധികാരം നിലനിര്‍ത്തും; ‘ബി.ജെ.പി ഓഫീസില്‍ തയ്യാറാക്കിയ’ എക്‌സിറ്റ് പോള്‍ ഫലങ്ങളെ തള്ളി മമത

കൊല്‍ക്കത്ത: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ ബി.ജെ.പിക്ക് വിജയം പ്രവചിക്കുന്ന എക്‌സിറ്റ്...

RCB vs GT : బెంగళూరును చిత్తు చేసిన టైటాన్స్.. గిల్ మెరుపులు

RCB vs GT :  హోం గ్రౌండ్ నరేంద్ర మోదీ స్టేడియంలో...

പേര്‍ഷ്യന്‍ ഗള്‍ഫിന്റെ ഭാവി അമേരിക്കന്‍ സാന്നിധ്യമില്ലാതെ; വിദേശ ശക്തികളുടെ സ്ഥാനം കടലിന്റെ ആഴങ്ങളില്‍ മാത്രം: മൊജ്തബ ഖാംനഇ

  ടെഹ്റാന്‍: പേര്‍ഷ്യന്‍ ഗള്‍ഫിന്റെ ഭാവി അമേരിക്കന്‍ സാന്നിധ്യമില്ലാത്തതായിരിക്കുമെന്ന് ഇറാന്റെ പരമോന്നത...