ಬೆಂಗಳೂರು,ಮೇ,18,2026 (www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.
ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಕೆಎಸ್ ಆರ್‌ಟಿಸಿ ಎಂ.ಡಿ ಅಕ್ರಂ ಪಾಷಾ ಶಾಕ್ ನೀಡಿದ್ದು ಮುಷ್ಕರದಲ್ಲಿ ಭಾಗಿಯಾಗುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. 
ಮುಷ್ಕರದ ದಿನದಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರಿಗೆ ‘ನೋ ವರ್ಕ್ ನೋ ಪೆ’ ಆದೇಶ ಜಾರಿ ಮಾಡಲಿದ್ದಾರೆ. ಅಂದರೆ ಅಂದು ಯಾವುದೇ ವೇತನವನ್ನು ನೀಡಲಾಗುವುದಿಲ್ಲ. ಸಾರ್ವಜನಿಕ ಸಾರಿಗೆಗೆ ಅಡ್ಡಿಪಡಿಸುವುದು ಅಥವಾ ನಿಯಮ ಉಲ್ಲಂಘಿಸಿ ಮುಷ್ಕರದಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಇಲಾಖಾ ಮಟ್ಟದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಕ್ರಂಪಾಷ ತಿಳಿಸಿದ್ದಾರೆ.
ಮುಷ್ಕರದ ಅವಧಿಯಲ್ಲಿ ಯಾವುದೇ ರೀತಿಯ ಮುಂಗಡ ರಜೆಗಳನ್ನು ಮಂಜೂರು ಮಾಡದಂತೆ ಮತ್ತು ಈಗಾಗಲೇ ರಜೆ ಪಡೆದಿರುವವರ ರಜೆಯನ್ನು (ಅತ್ಯಗತ್ಯ ಸಂದರ್ಭಗಳನ್ನು ಹೊರತುಪಡಿಸಿ) ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಎಂ.ಡಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.
Key words: Transport, employees, strike, KSRTC
The post ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





