ನವದೆಹಲಿ,ಮೇ,26,2026 (www.justkannada.in): ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಹೈವೋಲ್ಟೇಜ್ ಮೀಟಿಂಗ್ ಆರಂಭವಾಗಿದೆ.
ದೆಹಲಿಯ ಇಂದಿರಾ ಭವನದಲ್ಲಿ ಸಿಎಂ ಡಿಸಿಎಂ ಜೊತೆ ಹೈಕಮಾಂಡ್ ನಾಯಕರ ಮೀಟಿಂಗ್ ಆರಂಭವಾಗಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಅವರು ಚರ್ಚೆ ನಡೆಸುತ್ತಿದ್ದರೆ.
ಇಂದಿನ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯೋ ಅಥವಾ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಚರ್ಚೆಯೋ ಎಂಬುದು ಶೀಘ್ರದಲ್ಲೇ ತಿಳಿಯಲಿದೆ. ಹಲವು ಸಚಿವರು ಮತ್ತು ಶಾಸಕರು ದೆಹಲಿಗೆ ದೌಡಾಯಿಸಿದ್ದು ಬೀಡು ಬಿಟ್ಟಿದ್ದಾರೆ.
Key words: High command, leaders, meeting, CM, DCM
The post ಸಿಎಂ ,ಡಿಸಿಎಂ ಜೊತೆ ಹೈಕಮಾಂಡ್ ನಾಯಕರ ಮೀಟಿಂಗ್ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





