ಬೆಂಗಳೂರು,ಜೂನ್,9,2026 (www.justkannada.in): ನಿನ್ನೆ ಹೃದಯಾಘಾತದಿಂದ ನಿಧನರಾದ ಮಾಜಿ ಸಿಎಂ ಡಿ.ದೇವರಾಜ ಅರಸು ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಹಲವು ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಇಂದು ಸೂರಜ್ ಹೆಗ್ಡೆ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸೂರಜ್ ಹೆಗ್ಡೆ ಅವರ ಪಾರ್ಥೀವ ಶರೀರ ಇಡಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರು ಸೂರಜ್ ಹೆಗ್ಡೆ ಅವರಿಗೆ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣಗೋಪಾಲ್ ಸಹ ಅಂತಿಮ ದರ್ಶನ ಪಡೆದರು. ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್, ಡಿಸಿಎಂ ಪರಮೇಶ್ವರ್ ಸಾಥ್ ನೀಡಿದರು.
Key words: Rahul Gandhi, Congress leader, Suraj Hegde
The post ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





