ಮೈಸೂರು,ಜೂನ್,10,2026 (www.justkannada.in): ಕಳೆದ 45 ವರ್ಷಗಳಿಂದ ಪತ್ರಿಕಾ ಛಾಯಾಗ್ರಾಹಕರಾಗಿ ನಿರಂತರ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲ ಕೃಷ್ಣ ಅವರಿಗೆ ಪ್ರತಿಷ್ಠಿತ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ ಲಭಿಸಿದೆ.
ಬೆಂಗಳೂರುದಲ್ಲಿ ಇದೇ ತಿಂಗಳ 12ರಂದು ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಛಾಯಾಗ್ರಹಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ದೀರ್ಘಕಾಲದ ಸೇವೆ, ವೃತ್ತಿಪರ ನಿಷ್ಠೆ ಹಾಗೂ ಸಮಾಜಮುಖಿ ಛಾಯಾಚಿತ್ರಗಳ ಮೂಲಕ ಮಾಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
ಮೈಸೂರಿನಲ್ಲಿ ಕಳೆದ ನಾಲ್ಕೂವರೆ ದಶಕಗಳಿಂದ ಪತ್ರಿಕಾ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಗೋಪಾಲ ಕೃಷ್ಣ ಅವರು ಅನೇಕ ಪ್ರಮುಖ ಘಟನೆಗಳು, ಸಾಮಾಜಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಜೀವನದ ಅಪರೂಪದ ಕ್ಷಣಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಪತ್ರಿಕೋದ್ಯಮ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
2026 ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೂ ಪ್ರಗತಿ ಗೋಪಾಲ ಕೃಷ್ಣ ಭಾಜನರಾಗಿದ್ದರು.
ಪ್ರಗತಿ ಗೋಪಾಲ ಕೃಷ್ಣ ಅವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಛಾಯಾಗ್ರಹಣ ಹಾಗೂ ಪತ್ರಿಕೋದ್ಯಮ ವಲಯದ ಗಣ್ಯರು, ಸ್ನೇಹಿತರು ಮತ್ತು ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
Key words: Senior photojournalist, Pragati Gopala Krishna, receives, Karnataka Chhaya Ratna Award
The post ಹಿರಿಯ ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲ ಕೃಷ್ಣರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





