ಬೆಂಗಳೂರು, ಜೂನ್, 10,2026 (www.justkannada.in): ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಣಿಕೆ ಪತ್ತೆಯಾಗಿದ್ದು 1.37 ಕೋಟಿ ಮೌಲ್ಯದ ಚಿನ್ನಾಭರಣವನ್ನ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿಯಿದ್ದ 1.37 ಕೋಟಿ ಮೌಲ್ಯದ 24 ಕ್ಯಾರೆಟ್ನ 899.50 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಆರೋಪಿಯು ನಾಲ್ಕು ಕ್ಯಾಪ್ಸುಲ್ ಗಳಲ್ಲಿ ಚಿನ್ನದ ಪೇಸ್ಟ್ ಅಡಗಿಸಿ ಚಿನ್ನ ಸಾಗಟಕ್ಕೆ ಯತ್ನಿಸಿದ್ದ. ಆದರೆ ಅನುಮಾನಾಸ್ಪದ ವರ್ತನೆ ಕಂಡು ಬಂದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಕಳ್ಳಸಾಗಣೆ ವಿಚಾರ ಬಯಲಾಗಿದೆ. ಕಸ್ಟಮ್ಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.
Key words: Gold, worth Rs 1.37 crore, seized, Kempegowda Airport, Accused, arrested
The post ಕೆಂಪೇಗೌಡ ಏರ್ಪೋರ್ಟ್ ನಲ್ಲಿ 1.37 ಕೋಟಿ ಮೌಲ್ಯದ ಚಿನ್ನ ವಶಕ್ಕೆ: ಆರೋಪಿ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





