ಬೆಂಗಳೂರು,ಜೂನ್,11,2026 (www.justkannada.in): ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇನ್ನು ಕರ್ನಾಟಕದಿಂದ ರಾಜ್ಯಸಭೆ ಆಯ್ಕೆಯಾದ ಬಗ್ಗೆ ಮಾತನಾಡಿದ ಕಾಂಗ್ರೆಸ್ ನ ಪವನ್ ಖೇರಾ, ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿದ್ದಕ್ಕೆ ಖುಷಿ ಇದೆ. ಮುಂದೆ ನಾನು ಇಲ್ಲಿಗೆ ಬರುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.
Key words: Four, Rajya Sabha, members, elected, from, Karnataka
The post ಕರ್ನಾಟಕದಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





