15
June, 2026

A News 365Times Venture

15
Monday
June, 2026

A News 365Times Venture

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ : ಅಪಪ್ರಚಾರಕ್ಕೆ ಕಿವಿಗೊಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜೂನ್,15,2026 (www.justkannada.in): ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ವಿಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ. ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ ಎಂದಿದ್ದಾರೆ.

ಬಿಜೆಪಿ ಮೂಲತ: ಬಡವರ ವಿರೋಧಿ ಪಕ್ಷ

ಬಿಜೆಪಿ ಮೂಲತ: ಬಡವರ ವಿರೋಧಿ ಪಕ್ಷ.‌ ಅದು ಗ್ಯಾರಂಟಿ ಯೋಜನೆಗಳನ್ನು ಮೊದಲ ದಿನದಿಂದಲೇ  ವಿರೋಧಿಸುತ್ತಾ ಬಂದಿದೆ. ಮೊದಲು ಗ್ಯಾರಂಟಿ ಯೋಜನೆಗಳ ಜಾರಿಯೇ ಅಸಾಧ್ಯ ಎಂದರು, ನಂತರದ ದಿನಗಳಲ್ಲಿ ಹಣಕಾಸಿನ ಕೊರತೆಯಿಂದ ಸರ್ಕಾರ ದಿವಾಳಿಯಾಗಲಿದೆ ಎಂದರು. ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎನ್ನುವ ಪುಕಾರು ಹಬ್ಬಿಸುತ್ತಿದ್ದಾರೆ. ಇದು ಅವರ ರಾಜಕೀಯ ಹತಾಶೆಯ ಪ್ರತೀಕ ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಐದು ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೆ ತಂದಿದ್ದಲ್ಲದೆ, ಇದರಿಂದಾಗಿ ರಾಜ್ಯದ ಆರ್ಥಿಕತೆ ಮೇಲೆ ಏನೂ ದುಷ್ಪರಿಣಾಮ ಬೀರದಂತೆ ನೋಡಿಕೊಂಡಿದ್ದೇನೆ. ಇಂದು ಕರ್ನಾಟಕ ರಾಜ್ಯವು ತಲಾವಾರು ಆದಾಯದಲ್ಲಿ ದೇಶಕ್ಕೇ ಮೊದಲನೇ ಸ್ಥಾನದಲ್ಲಿದೆ, ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರದ ಎರಡನೇ ರಾಜ್ಯ ಕರ್ನಾಟಕ. ಖಜಾನೆ ಖಾಲಿಯಾಗಿದ್ದರೆ, ಸರ್ಕಾರ ದಿವಾಳಿ ಸ್ಥಿತಿಯಲ್ಲಿದ್ದರೆ ಈ ಸಾಧನೆ ಸಾಧ‍್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗ್ಯಾರಂಟಿ ನಕಲು ಮಾಡುತ್ತಿರುವ ಬಿಜೆಪಿ

ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ, ಅದೇ ಯೋಜನೆಗಳನ್ನು ಮಧ್ಯಪ್ರದೇಶ, ಬಿಹಾರ, ಪಶ್ಚಿಮಬಂಗಾಳ ರಾಜ್ಯಗಳಲ್ಲಿ ನಕಲು ಹೊಡೆದು ಅಧಿಕಾರಕ್ಕೆ ಬಂದಿದೆ. ಇವರಿಗೆ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಯಾವ ನೈತಿಕತೆ ಇದೆ? ಕೆಲವು ರಾಜ್ಯಗಳ ಚುನಾವಣಾ ಪೂರ್ವದಲ್ಲಿ ಬಿಜೆಪಿ ಗ್ಯಾರಂಟಿ ಯೋಜನೆಗಳ ಆಶ್ವಾಸನೆ ನೀಡಿದರೂ ಅವುಗಳನ್ನು ಸಂಪೂರ್ಣವಾಗಿ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ

ಈ ಯೋಜನೆಗಳು ನಿಜವಾದ ಅರ್ಹರಿಗೆ ಸಿಗಬೇಕು, ಅದು ಅನರ್ಹರ ಪಾಲಾದಾಗ ಅದನ್ನು ತಡೆಗಟ್ಟುವುದು ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ. ನಮ್ಮ ಜನರು ಕೂಡಾ ಈ ಬಗ್ಗೆ ಯೋಚನೆ ಮಾಡಬೇಕಾಗಿದೆ. ದುರಾಸೆಗೆ ಬಲಿಬಿದ್ದು ಸರ್ಕಾರಕ್ಕೆ ಮೋಸ ಮಾಡಿ ಗ್ಯಾರಂಟಿ ಯೋಜನೆಗಳ ಲಾಭ ತೆಗೆದುಕೊಳ್ಳುವುದು ಕಾನೂನಿನ ಉಲ್ಲಂಘನೆ ಮಾತ್ರವಲ್ಲ, ರಾಜ್ಯದ ಜನತೆಗೆ ಬಗೆವ ದ್ರೋಹವಾಗಿದೆ. ಇಂತಹ ವಿಷಯದಲ್ಲಿ ವಿರೋಧ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಅಪಪ್ರಚಾರ ಮಾಡಲು ಹೋಗದೆ, ಅರ್ಹರಿಗೆ ಯೋಜನೆಗಳನ್ನು ತಲುಪಿಸಲು ಸರ್ಕಾರಕ್ಕೆ ನೆರವಾಗಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Key words: Guarantees, BJP, Slander, Former CM, Siddaramaiah

The post ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ : ಅಪಪ್ರಚಾರಕ್ಕೆ ಕಿವಿಗೊಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Southwest Monsoon: రాష్ట్రవ్యాప్తంగా విస్తరించిన నైరుతి రుతుపవనాలు.. పిడుగులతో కూడిన వర్షాలకు హెచ్చరిక

Southwest Monsoon: ఆంధ్రప్రదేశ్‌లో నైరుతి రుతుపవనాలు పూర్తిస్థాయిలో విస్తరించినట్లు రాష్ట్ర విపత్తుల...

RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು

ತ್ರಿಶೂರ್,ಜೂನ್,15,2026 (www.justkannada.in): ಆರ್ ಎಸ್ಎಸ್ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ...

സമൂഹത്തില്‍ കുറച്ച് ബ്ലസ്ഡായ സ്ത്രീകള്‍ സൗജന്യം വേണ്ടെന്ന് വെച്ചാല്‍ പദ്ധതി വന്‍ വിജയമാവും; പ്രിയദര്‍ശിനി പദ്ധതിയെ സ്വാഗതം ചെയ്ത് സുരേഷ് ഗോപി

തൃശ്ശൂര്‍: സ്ത്രീകള്‍ക്കുള്ള സൗജന്യ യാത്ര പദ്ധതിയായ കെ.എസ്.ആര്‍.ടി.സി പ്രിയദര്‍ശിനി പദ്ധതിയെ പിന്തുണച്ച്...

`தொடர்ந்து வட மாநில இளைஞர்கள் கைதுசெய்யப்படுவது பல கேள்விகளை எழுப்பியுள்ளது!' – அண்ணாமலை

தமிழ்நாட்டில் தவெக ஆட்சி அமைந்ததிலிருந்து தொடர்ந்து சட்ட ஒழுங்கு சிக்கல்கள் நீடிப்பதாக...