16
June, 2026

A News 365Times Venture

16
Tuesday
June, 2026

A News 365Times Venture

RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು, ಜೂನ್, 15,2026 (www.justkannada.in) : ಆರ್ ಎಸ್ ಎಸ್ ನೋಂದಣಿ ವಿಚಾರವಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿ​ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ, ಬರೆದಿದ್ದು  ಕೆಲ ಅಂಶಗಳ ಬಗ್ಗೆ  ವಿವರ ನೀಡುವಂತೆ ಆಗ್ರಹಿಸಿದ್ದಾರೆ.

ಮೋಹನ್ ಭಾಗವತ್  ಅವರಿಗೆ ಪತ್ರ ಬರೆದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಂಘದ ಕಾರ್ಯಚಟುವಟಿಕೆಗಳು, ಸಂಘಕ್ಕೆ ಬರುವ ಆದಾಯದ ಮೂಲ, ಆಸ್ತಿಪಾಸ್ತಿ ಬಗ್ಗೆ ಬಹಿರಂಗಪಡಿಸುವಂತೆ ತಿಳಿಸಿದ್ದಾರೆ.

ರಾಷ್ಟ್ರೀಯತೆ, ಶಿಸ್ತು ಮತ್ತು ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಸಂಘಟನೆಯೊಂದು ಪಾರದರ್ಶಕತೆ, ಕಾನೂನಿನ ಅನುಸರಣೆ ಮತ್ತು ಭಾರತದ ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು. ಸಾಮಾನ್ಯ ಭಾರತೀಯರು ನಿಯಮಗಳನ್ನು ಪಾಲಿಸಬೇಕು. ತಾನು ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಆರ್‌ಎಸ್‌ಎಸ್‌ ಗೆ ಇಲ್ಲ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್‌ ಜಿಒಗಳು, ಟ್ರಸ್ಟ್‌ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಈ ಸಂದರ್ಭವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲ. ಸಾಂವಿಧಾನಿಕ ಆತ್ಮಾವಲೋಕನಕ್ಕಾಗಿಯೂ ಬಳಸಿಕೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ.  ಆರ್ ಎಸ್ ಎಸ್  ತನ್ನನ್ನು ತಾನು ನೋಂದಾಯಿಸಿಕೊಳ್ಳುವುದು , ತನ್ನ ಚಟುವಟಿಕೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು. ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಮತ್ತು ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ ಹಾಗೂ ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Key words: Home Minister, Priyank Kharge writes, RSS,  Mohan Bhagwat

The post RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സമാധാന കരാറില്‍ ഡിജിറ്റലി ഒപ്പുവച്ചതായി ട്രംപ്; കരാറിലെ വ്യവസ്ഥകള്‍ ഇറാന് അഭിമാനകരമെന്ന് പെസെസ്‌കിയാന്‍

പാരീസ്: യു.എസും ഇറാനും സമാധാന കരാറില്‍ ഡിജിറ്റലായി ഒപ്പുവച്ചെന്ന് യു.എസ് പ്രസിഡന്റ്...

`மனம் பதறுகிறது; மூன்று வயது குழந்தை… சமூகம் பேரழிவை நோக்கி…' – பா.ரஞ்சித் ஆதங்கம்!

கும்மிடிப்பூண்டியில் 3-வயது சிறுமி பாலியல் வன்கொடுமை செய்யப்பட்ட சம்பவம் பெரும் அதிர்வலைகளை...

Off The Record: వైసీపీకి కొరకరాని కొయ్యలా మారిన రేపల్లె నియోజకవర్గం..

Off The Record: ఆంధ్రప్రదేశ్‌లో కొన్ని అసెంబ్లీ నియోజకవర్గాలు ప్రతిపక్షం వైసీపీకి...

യു.ഡി.എഫ് നേതാക്കളും തോറ്റ സ്ഥാനാര്‍ത്ഥികളും പ്രിയദര്‍ശിനി പദ്ധതി ഉദ്ഘാടനം ചെയ്തത് തെറ്റെന്ന് കെ.എന്‍ ബാലഗോപാല്‍

തിരുവനന്തപുരം: സംസ്ഥാന സര്‍ക്കാര്‍ കെ.എസ്.ആര്‍.ടി.സി ഓര്‍ഡിനറി ബസ്സുകളില്‍ സ്ത്രീകള്‍ക്ക് യാത്ര സൗജന്യമാക്കുന്നതിനായി...