ಬೆಳಗಾವಿ,ಜೂನ್,24,2026 (www.justkannada.in): ತಮ್ಮ ಸಂಬಂಧಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಎಷ್ಟು ಕಡೆ ದಾಳಿಯಾಗಿದೆ ಅನ್ನೋದು ಗೊತ್ತಿಲ್ಲ. ಯಾವ ಕಾರಣಕ್ಕೆ ಇಡಿ ದಾಳಿ ಆಗಿದೆ ಅನ್ನೋದು ಗೊತ್ತಿಲ್ಲ. ಇದೊಂದು ರೊಟಿನ್ ದಾಳಿಯಾಗಿದೆ. ಇದರ ಬಗ್ಗೆ ಏನು ಹೇಳಲಿ ಎಂದರು.
ಇಡಿ ಅಧಿಕಾರಿಗಳು ಹೊರ ಬಂದ ಬಳಿಕ ಯಾಕೆ ದಾಳಿಯಾಗಿದೆ ಅಂತಾ ಗೊತ್ತಾಗುತ್ತೆ. ಎಷ್ಟು ಕಡೆ ದಾಳಿ ನಡೆದಿದೆ ಎಂಬ ಮಾಹಿತಿ ನನಗೆ ಇಲ್ಲ. ಇಡಿ ದಾಳಿ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
Key words: ED, raid, relative, Minister, Satish Jarkiholi, speak, tomorrow
The post ಸಂಬಂಧಿ ಮೇಲೆ ಇಡಿ ದಾಳಿ ವಿಚಾರ: ನಾಳೆ ಮಾತನಾಡುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





