ದಾವಣಗೆರೆ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಲಹೆ ನೀಡಿದರು.
ಇಂದು ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ರೈತರ ಜೊತೆ ಸಿಎಂ ಡಿಕೆ ಶಿವಕುಮಾರ್ ಚರ್ಚೆ ಮಾಡಲಿ. ಹೆಚ್ ಡಿಕೆ ಸಿಎಂ ಆಗಿದ್ದಾಗ ಟೌನ್ ಶಿಪ್ ಯೋಜನೆ ಜಾರಿಗೆ ಮುಂದಾಗಿದ್ದರು. ನಂತರ ಆ ಯೋಜನೆಯನ್ನ ಕುಮಾರಸ್ವಾಮಿ ರದ್ದು ಮಾಡಿದ್ದಾರೆ. ಇಂತಹ ವಿಚಾರದಲ್ಲಿ ಸಿಎಂ ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದರು.
ಅಯೋಧ್ಯೆ ಶ್ರೀರಾಮಮಂದಿರ ಹುಂಡಿ ಹಣ ಕಳ್ಳತನ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ವಿ.ಸೋಮಣ್ಣ, ಪ್ರಕರಣದ ಬಗ್ಗೆ ಯುಪಿ ಸರ್ಕಾರ ಎಸ್ ಐಟಿ ತನಖೆಗೆ ಸೂಚಿಸಿದೆ. ಈ ವಿಚಾರದಲ್ಲಿ ಯಾರೇ ತಪ್ಪು ಮಾಡಿದರೂ ಅದು ಪಾಪದ ಕೆಲಸ. ಪ್ರಕರಣ ಬಗ್ಗ ಸೂಕ್ತ ತನಿಖೆ ಆಗಲಿದೆ ಎಂದು ತಿಳಿಸಿದರು.
Key words: Bidadi Township, CM, decision, Union Minister, V. Somanna
The post ಬಿಡದಿ ಟೌನ್ ಶಿಪ್: ಸಿಎಂ ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





