ಶಿವಮೊಗ್ಗ,ಜೂನ್,27,2026 (www.justkannada.in): ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾ. ಮಾ ಹರೀಶ್ ಅವರ ಪುತ್ರ ಉಲ್ಲಾಸ್(28) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉಲ್ಲಾಸ್ ಅವರು ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್ ಎಂದು ತೆರಳಿದ್ದರು. ಬೆಳಿಗ್ಗೆ ಬೆಟ್ಟ ಹತ್ತುವಾಗ ಉಲ್ಲಾಸ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಲ್ಲಾಸ್ ಅವರಿಗೆ ಡಿಸೆಂಬರ್ ತಿಂಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಇತ್ತೀಚೆಗಷ್ಟೆ ನಿಶ್ಚಿತಾರ್ಥವೂ ನಡೆದಿತ್ತು.
ಆದರೆ ಇದೀಗ ಹಠಾತ್ತನೆ ಉಲ್ಲಾಸ್ ನಿಧನ ಹೊಂದಿದ್ದಾರೆ. ಕೊಡಚಾದ್ರಿ ಬೆಟ್ಟಕ್ಕೆ ಗೆಳೆಯರೊಟ್ಟಿಗೆ ಚಾರಣಕ್ಕಾಗಿ ಹೋಗಿದ್ದಾಗ ಅವರಿಗೆ ಹೃದಯಾಘಾತವಾಗಿದೆ. ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್ ಹೆಸರಿನ ನಾಟಕ ಶಾಲೆ ನಡೆಸುತಿದ್ದರು.
Key words: Producer, Ba.Ma Harish, son, dies, heart attack
The post ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





