ಕಲಬುರಗಿ,ಜುಲೈ,3,2026 (www.justkannada.in): ಪೋಕ್ಸೊ ಪ್ರಕರಣದ ಆರೋಪಿ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಪೋಕ್ಸೋ ಪ್ರಕರಣದ ಆರೋಪಿ ಮಂಜಾನಾಥ್ ಪರಾರಿಯಾಗಿದ್ದಾನೆ. ಕಳೆದ ಒಂದು ವಾರದ ಹಿಂದೆ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಠಾಣೆಗೆ ಪೊಲೀಸರು ಕರೆತಂದಿದ್ದರು ಎನ್ನಲಾಗಿದೆ.
ಆರೋಪಿ ಪರಾರಿ ಹಿನ್ನೆಲೆಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಗಳಾದ ರವಿ, ಪ್ರಶಾಂತ್ ಸೇರಿ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅದ್ದುರು ಶ್ರೀನಿವಾಸುಲು ಅವರು ಮೂವರು ಸಿಬ್ಬಂದಿಗಳನ್ನ ಸಸ್ಪೆಂಡ್ ಮಾಡಿದ್ದಾರೆ.
Key words: POCSO case, accused, escapes, police, suspended
The post ಪೋಕ್ಸೋ ಕೇಸ್ ಆರೋಪಿ ಎಸ್ಕೇಪ್: ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





