8
July, 2026

A News 365Times Venture

8
Wednesday
July, 2026

A News 365Times Venture

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ

Date:

ಮಂಗಳೂರು, ಜುಲೈ,7,2026 (www.justkannada.in) : ತೂಗು ಸೇತುವೆಗಳ ಸರದಾರ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ.

ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಇಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಹೃದ್ರೋಗ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಅರಂಬೂರಿನ ನಿವಾಸಿಯಾಗಿರುವ ಇವರು  ಗ್ರಾಮೀಣ ದುರ್ಗಮ ಪ್ರದೇಶಗಳಲ್ಲಿ ಕಡಿಮೆ ವೆಚ್ಚದ ಸೇತುವೆ ನಿರ್ಮಿಸಿದ್ರು. 1989ರಲ್ಲಿ ತಮ್ಮ ಸ್ವಗ್ರಾಮವಾದ ಸುಳ್ಯದ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಮೊದಲ ಕಡಿಮೆ ವೆಚ್ಚದ ತೂಗು ಸೇತುವೆಯನ್ನು ನಿರ್ಮಿಸುವ ಮೂಲಕ ತಮ್ಮ ಐತಿಹಾಸಿಕ ಪಯಣವನ್ನು ಆರಂಭಿಸಿದರು.

ದುರ್ಗಮ ಕಾಡುಗಳು, ನದಿ ದಾಟಲು ದೋಣಿಯನ್ನೇ ಅವಲಂಬಿಸಿದ್ದ ಹಳ್ಳಿಗಳು ಹಾಗೂ ರಸ್ತೆ ಸಂಪರ್ಕವಿಲ್ಲದ ನೂರಾರು ಪ್ರದೇಶಗಳಿಗೆ ಗಿರೀಶ್ ಅವರ ತೂಗು ಸೇತುವೆಗಳು ಜೀವನಾಡಿಯಾದವು. ಕರ್ನಾಟಕ ಮಾತ್ರವಲ್ಲದೆ ಕೇರಳ, ಒಡಿಶಾ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪರಿಸರ ಸ್ನೇಹಿ ಹಾಗೂ ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿ ಪ್ರಶಂಸೆಗೆ ಪಾತ್ರರಾಗಿದ್ದರು. ಇವರ ಈ ಅದ್ವಿತೀಯ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2017 ರಲ್ಲಿ ಪದ್ಮಶ್ರೀ ನೀಡಿ ಗೌರವಿಸಿತ್ತು.

Key words: Padma Shri, Awardee, Dr. Girish Bhardwaj, Passes Away

The post ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സര്‍ക്കാര്‍ എത്ര ചെലവാക്കിയെന്നത് അപ്രസക്തം; വിഴിഞ്ഞം വിഷയത്തിലുള്ളത് മറ്റ് രണ്ട് പ്രശ്‌നങ്ങളെന്ന് തോമസ് ഐസക്ക്

തിരുവനന്തപുരം: വിഴിഞ്ഞം തുറമുഖവുമായി ബന്ധപ്പെട്ട് അദാനി- എം.എസ്.സി ഓഹരി കൈമാറ്റത്തില്‍ രണ്ട്...

ஆகஸ்ட் 17 முதல் ‘எங்கிருந்தும் பத்திரப்பதிவு’ நடைமுறை : தமிழக அரசு அரசாணை வெளியீடு!

தமிழ்நாட்டில் பத்திரப்பதிவு சேவையை முழுமையாக டிஜிட்டல் மயமாக்கும் நடவடிக்கையாக, STAR 3.0...

టూరిస్టులకు గుడ్ న్యూస్.. ఒక్క రోజులో 5 అద్భుత గమ్యస్థానాలు.! TSTDC అదిరిపోయే టూర్ ప్యాకేజీ.!

తెలంగాణలోని ప్రముఖ ఆధ్యాత్మిక, సాంస్కృతిక మరియు వారసత్వ ప్రదేశాలను ఒక్క రోజులోనే...