9
July, 2026

A News 365Times Venture

9
Thursday
July, 2026

A News 365Times Venture

ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿಸಮನ್ವಯದಿಂದ ಕಾರ್ಯನಿರ್ವಹಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು, ಜುಲೈ, 7,2026 (www.justkannada.in): ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿ ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದ ಮೇರೆಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತಂತೆ ಇಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು. ಪಕ್ಷದ ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರ್ಹ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಸಿಕೊಳ್ಳುವುದು, ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವುದು ಹಾಗೂ ಇತರೆ ಸೂಕ್ತ ಬದಲಾವಣೆಗಳನ್ನು ಮಾಡಿಸಿಕೊಳ್ಳಲು ಸರಿಯಾದ ಮಾರ್ಗದರ್ಶನ ಮತ್ತು ಅರಿವು ಮೂಡಿಸಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿ ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು, ಯುವುದೇ ಒಬ್ಬ ಮತದಾರನಿಗೂ ತಿಳುವಳಿಕೆ ಇಲ್ಲದೇ ಮತದಾನದ ಹಕ್ಕು ತಪ್ಪದಂತೆ ನಿಗಾ ವಹಿಸಬೇಕು ಎಂದು ಅವರು ಕರೆ ನೀಡಿದರು.

ಸಭೆಯಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಬಿ.ಜೆ. ವಿಜಯ್ ಕುಮಾರ್, ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಮೂರ್ತಿ, ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Key words: Meeting, Congress Office, SIR, Minister, Yathindra Siddaramaiah

The post ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿಸಮನ್ವಯದಿಂದ ಕಾರ್ಯನಿರ್ವಹಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാര്‍ച്ച് നടത്താന്‍ കോടതി അനുമതി തന്നു, ബി.ജെ.പി ഗുണ്ടകള്‍ തടഞ്ഞു: പൊലീസ് പരാജയപ്പെട്ടുവെന്ന് മമതാ ബാനര്‍ജി

കൊല്‍ക്കത്ത: പശ്ചിമ ബംഗാളിലെ ബയൂരിപൂരില്‍ പതിനൊന്ന് വയസുകാരിയെ ബലാത്സംഗം ചെയ്ത് കൊലപ്പെടുത്തിയ...

30 ஆண்டுகளில் 325 மில்லியன் டாலர் லஞ்சம்: சீனாவில் முன்னாள் அரசு அதிகாரிக்கு மரண தண்டனை!

சீனாவில் லஞ்சம் பெற்ற முன்னாள் அரசு அதிகாரி ஒருவருக்கு மரண தண்டனை...

Kodali Nani: రావణ్ అరెస్టుపై కొడాలి నాని సంచలన వ్యాఖ్యలు.. ఆయన టీడీపీయే..!

Kodali Nani: వైఎస్‌ఆర్‌ కాంగ్రెస్‌ పార్టీ సీనియర్‌ నేత, మాజీ మంత్రి...

ഫുട്‌ബോള്‍ ലോകകപ്പില്‍ അമേരിക്ക നിയമങ്ങള്‍ വളച്ചൊടിക്കുന്നു; എതിരാളികളെ ഭീഷണിപ്പെടുത്തുന്നു: പെസസ്‌കിയാന്‍

ടെഹ്‌റാന്‍: ഫുടബോള്‍ ലോകകപ്പില്‍ ആതിഥേയത്വം വഹിക്കുന്ന അമേരിക്ക അവരുടെ വിശാലമായ വിദേശനയം...