14
July, 2026

A News 365Times Venture

14
Tuesday
July, 2026

A News 365Times Venture

ಅತಿಥಿ ಉಪನ್ಯಾಸಕರ ಆಯ್ಕೆ: ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

Date:

ಬೆಂಗಳೂರು, ಜುಲೈ ‌13, 2026 (www.justkannada.in) : ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು ಒಳಗೊಂಡಂತೆ) ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ವೇಳಾಪಟ್ಟಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು,  ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಲು / ತಿದ್ದುಪಡಿ (EDIT) ಮಾಡಲು ಪ್ರಾರಂಭದ ದಿನಾಂಕ: 11.07.2026,

ಅರ್ಜಿ ಸಲ್ಲಿಸಲು / ತಿದ್ದುಪಡಿ ಮಾಡಲು ಕೊನೆಯ ದಿನಾಂಕ: 18.07.2026,

ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: 19.07.2026,

ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಿದ ನಂತರ ಅರ್ಜಿಯನ್ನು EDIT ಮಾಡಲು ಅವಕಾಶ: 19.07.2026 ರಿಂದ 22.07.2026,

ತಾತ್ಕಾಲಿಕ ಕಾರ್ಯಭಾರ (Workload) ಪ್ರಕಟಿಸುವ ದಿನಾಂಕ: 25.07.2026

ಕೌನ್ಸಿಲಿಂಗ್ ಮೆರಿಟ್ ಪಟ್ಟಿ ಹಾಗೂ ಕಾರ್ಯಭಾರ ಪ್ರಕಟಿಸುವ ದಿನಾಂಕ: 26.07.2026

ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ: 28.07.2026

ವಿದ್ಯಾರ್ಹತೆ ಮತ್ತು ಆಯ್ಕೆ ಮಾನದಂಡಗಳು

ಯುಜಿಸಿ 2018ರ ಮಾರ್ಗಸೂಚಿಗಳನ್ವಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.55 ಅಂಕಗಳನ್ನು (ಎಸ್‌ಸಿ/ಎಸ್ ಟಿ/ಓಬಿಸಿ/ವಿಶೇಷ ಚೇತನರಿಗೆ ಶೇ.50) ಹೊಂದಿರಬೇಕು. ಇದರೊಂದಿಗೆ ಎನ್‌ಇಟಿ / ಎಸ್‌ಎಲ್‌ಇಟಿ / ಕೆ.ಸೆಟ್ / ಪಿಹೆಚ್.ಡಿ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ.

ಮೆರಿಟ್ ಅಂಕಗಳ ಹಂಚಿಕೆ (ಒಟ್ಟು 100 ಅಂಕಗಳು) :

ಸ್ನಾತಕೋತ್ತರ ಪದವಿ ಅಂಕಗಳು: ಅಭ್ಯರ್ಥಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ಭಾಗವನ್ನು ಪರಿಗಣಿಸಲಾಗುವುದು (ಗರಿಷ್ಠ 25 ಅಂಕಗಳು).

​ಹೆಚ್ಚುವರಿ ವಿದ್ಯಾರ್ಹತೆ: ಪಿಹೆಚ್.ಡಿ ಹೊಂದಿದ್ದಲ್ಲಿ 12 ಅಂಕಗಳು; ಎನ್‌ಇಟಿ/ಕೆ-ಸೆಟ್/ಎಸ್‌ಎಲ್‌ಇಟಿ ಹೊಂದಿದ್ದಲ್ಲಿ 09 ಅಂಕಗಳು; ಎಂ.ಫಿಲ್ ಹೊಂದಿದ್ದಲ್ಲಿ 06 ಅಂಕಗಳು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 48 ಅಂಕಗಳನ್ನು (ಮಿತಿ 16 ವರ್ಷಗಳು) ನೀಡಲಾಗುವುದು.

ಅರ್ಹ ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುವುದು.

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು :

2025-26 ನೇ ಸಾಲಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೆ, ತಮ್ಮ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.

ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸಲ್ಲಿಸಿದ ಸೇವೆಯನ್ನು ಮಾತ್ರ ಪರಿಗಣಿಸಲಾಗುವುದು. ಖಾಸಗಿ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸುವುದಿಲ್ಲ.

ಸಾಮಾನ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು- https://emis.karnataka.gov.in/application.aspx ಮತ್ತು ಸರ್ಕಾರಿ ಚಿತ್ರಕಲಾ / ಸಂಸ್ಕೃತ ಕಾಲೇಜುಗಳು –  https://emis.karnataka.gov.in/AppSFC.aspx ಲಿಂಕ್ ಗಳ ಮೂಲಕ  ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದಲ್ಲಿ ಅಭ್ಯರ್ಥಿತನವನ್ನು ತಿರಸ್ಕರಿಸಲಾಗುವುದು. ಒಂದು ವೇಳೆ ಹಾಜರುಪಡಿಸಿದ ದಾಖಲೆಗಳು ನಕಲಿ ಎಂದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾದ ನಂತರ ಪ್ರಸೂತಿ ರಜೆ ಮೇಲೆ ತೆರಳುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯವನ್ನು ನೀಡಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ https://dce.karnataka.gov.in ಅನ್ನು ಪ್ರತಿ ನಿತ್ಯ ಗಮನಿಸುವಂತೆ  ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Selection, Guest Lecturer,  Application, invitation, online

The post ಅತಿಥಿ ಉಪನ್ಯಾಸಕರ ಆಯ್ಕೆ: ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യുവതിക്കെതിരായ അധിക്ഷേപം; തൊപ്പി ഗാങ് അംഗം മമ്മു അറസ്റ്റില്‍; നടപടി ഹനാന്‍ ഷായുടെ സുഹൃത്തിന്റെ ഭാര്യയുടെ പരാതിയില്‍

മലപ്പുറം: തൊപ്പി എന്ന പേരിലറിയപ്പെടുന്ന യൂട്യൂബര്‍ നിഹാദിന്റെ സംഘാംഗമായ മുഹമ്മദ് എന്ന...

லாக்கப் மரணம்: 'அடித்தே கொன்ற காவல்துறையினரைப் முதல்வர் விஜய் பாதுகாக்கிறாரா?'- சீமான் கண்டனம்

நாகர்கோவிலில் குட்கா வழக்கில் கைதுசெய்து சிறையிலடைக்கப்பட்ட சபரிவர்மன் என்ற மாற்றுத்திறனாளி நீதிமன்றக்...

Vijayashanthi: రక్షించాల్సిన వారే తప్పు చేస్తే ఎలా?.. షాబాద్ నరమేధంపై గళమెత్తిన ‘రాములమ్మ’

Vijayashanthi: రంగారెడ్డి జిల్లా షాబాద్ ఘోర హత్యాకాండపై ప్రముఖ నటి, కాంగ్రెస్...

ഒന്നാം റാങ്കുകാര്‍ക്ക് പോലും നിയമനമില്ല; മണ്ണ് വാരിത്തിന്ന് പ്രതിഷേധിച്ച് എല്‍.പി.എസ്.ടി റാങ്ക് ഹോള്‍ഡര്‍മാര്‍

തിരുവനന്തപുരം: എല്‍.പി. സ്‌കൂള്‍ ടീച്ചര്‍ (എല്‍.പി.എസ്.ടി) പി.എസ്.സി റാങ്ക് ലിസ്റ്റിലുള്ളവര്‍ സെക്രട്ടറിയേറ്റിന്...