ಮಂಡ್ಯ, ಜುಲೈ, 15,2026 (www.justkannada.in): ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್.ನಂದಿನಿ ಅವರು ಪಾಂಡವಪುರ ತಾಲೂಕಿನ ಆವರಣದಲ್ಲಿ ನಿರ್ಮಾಣವಾಗಿರುವ ಅಕ್ಕ ಕೆಫೆಗೆ ಅನಿರೀಕ್ಷಿತ ಭೇಟಿ ನೀಡಿ, ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಸೇವಾ ನಿರ್ವಹಣೆಯನ್ನು ಪರಿಶೀಲಿಸಿದರು.
ಭೇಟಿಯ ವೇಳೆ ಕೆಫೆಯಲ್ಲಿ ತಯಾರಿಸಲಾಗುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ, ಆಹಾರ ಸಂಗ್ರಹಣೆ ವಿಧಾನ ಹಾಗೂ ಗ್ರಾಹಕರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಸಿಇಒ ಕೆ. ಆರ್.ನಂದಿನಿ ಅವರು ಪರಿಶೀಲನೆ ನಡೆಸಿದರು.
ಅಕ್ಕ ಕೆಫೆಯು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಿಸಲ್ಪಡುತ್ತಿರುವ ಹಿನ್ನೆಲೆಯಲ್ಲಿ, ಗುಣಮಟ್ಟದ ಆಹಾರ ಹಾಗೂ ಸ್ವಚ್ಛತೆಯ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.
ಗ್ರಾಹಕರ ಆರೋಗ್ಯದ ದೃಷ್ಟಿಯಿಂದ ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಯಾವುದೇ ನಿರ್ಲಕ್ಷ್ಯ ತೋರದಂತೆ ಸಿಬ್ಬಂದಿಗೆ ಸಲಹೆ ನೀಡಿದರು.
ಮಹಿಳಾ ಸಂಘಗಳ ಆರ್ಥಿಕ ಸಬಲೀಕರಣಕ್ಕೆ ಅಕ್ಕ ಕೆಫೆ ಮಹತ್ವದ ವೇದಿಕೆಯಾಗಿದ್ದು, ಉತ್ತಮ ಸೇವೆ ಹಾಗೂ ಗುಣಮಟ್ಟದ ಮೂಲಕ ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬೇಕು ಎಂದು ಸಿಇಒ ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅಕ್ಕ ಕೆಫೆಯ ಸಿಬ್ಬಂದಿ ಉಪಸ್ಥಿತರಿದ್ದರು.
Key words: Mandya, ZP CEO, surprise visit, Akka Cafe
The post ಅಕ್ಕ ಕೆಫೆಗೆ ಜಿ.ಪಂ CEO ಅನಿರೀಕ್ಷಿತ ಭೇಟಿ; ಆಹಾರದ ಗುಣಮಟ್ಟ, ಸ್ವಚ್ಛತೆ ಪರಿಶೀಲನೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





