ಬೆಂಗಳೂರು,ಜುಲೈ,20,2026 (www.justkannada.in): ರಾಜ್ಯದಲ್ಲಿ ಬರ ಸಂಬಂಧ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ರಾಜ್ಯದ ಪರಿಸ್ಥಿತಿ ಹೇಗಿದೆ ಅನ್ನೋದನ್ನ ಕೇಂದ್ರಕ್ಕೆ ತಿಳಿಸಿದ್ದೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಜೂನ್ ತಿಂಗಳಲ್ಲಿ 42% , ಜುಲೈ ತಿಂಗಳಲ್ಲಿ 34% ಮಳೆಯ ಕೊರತೆ ದಾಖಲಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಈಗಾಗಲೇ ಬಿತ್ತನೆಯಾದ ಬೆಳೆಗಳಲ್ಲಿ ಸುಮಾರು 80% ಭಾಗ ಹಾನಿಗೊಳಗಾಗಿದೆ. ಜಲಾಶಯಗಳ ಒಳಹರಿವು ಹಾಗೂ ಅಂತರ್ಜಲ ಮಟ್ಟವೂ ನಿರಂತರವಾಗಿ ಕುಸಿಯುತ್ತಿದ್ದು, ಕುಡಿಯುವ ನೀರಿನ ಬಿಕ್ಕಟ್ಟಿನ ಆತಂಕವೂ ಎದುರಾಗಿದೆ ಎಂದು ತಿಳಿಸಿದರು.
ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ ಪರಮೇಶ್ವರ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ್ದಾರೆ. ಪ್ರಸ್ತುತದ ವಾಸ್ತವ ಸ್ಥಿತಿಗೆ ಅನುಗುಣವಾಗಿ ಬರ ಮೌಲ್ಯಮಾಪನ ವ್ಯವಸ್ಥೆ, ರೈತರಿಗೆ ತ್ವರಿತವಾಗಿ ಪರಿಹಾರ ತಲುಪುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ ಎಂದರು.
Key words: Drought, letter, Central Government, Home Minister, Priyank Kharge
The post ರಾಜ್ಯದಲ್ಲಿ ಬರ: ಕೇಂದ್ರಕ್ಕೆ ಪತ್ರ ಬರೆದು ವಾಸ್ತವ ಸ್ಥಿತಿ ತಿಳಿಸಿದ್ದೇವೆ-ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





