ಮೈಸೂರು,ಆಗಸ್ಟ್,1,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕ ಸ್ಮಾರಕವನ್ನ ಉದ್ಘಾಟಿಸಿದ್ದಾರೆ.
ಆಂಧ್ರ ಪ್ರದೇಶದಿಂದ ಮೈಸೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ದೇವರಾಜ ಮೊಹಲ್ಲಾದ ನಾರಾಯಣಶಾಸ್ತ್ರಿ ರಸ್ತೆಯಲ್ಲಿ ರಾಮಕೃಷ್ಣ ಆಶ್ರಮದಲ್ಲಿ 45 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿವೇಕ ಸ್ಮಾರಕವನ್ನ ಪ್ರಧಾನಿ ಮೋದಿ ಉದ್ಘಾಟಿಸಿದರು. ಸಿಎಂ ಡಿಕೆ ಶಿವಕುಮಾರ್ , ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಾಥ್ ನೀಡಿದರು.
ನಂತರ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.
Key words: PM Modi, inaugurated, Vivek Memorial, Mysore
The post ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





