ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಡಿಕೆ ಶಿವಕುಮಾರ್ ತೀವ್ರ ಕಸರತ್ತು ನಡೆಸುತ್ತಿದ್ದು ಇಂದೇ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಸಂಪೂರ್ಣ ಸಂಪುಟ ಇರಬೇಕು. ಇದರಿಂದ ಮುಖ್ಯಮಂತ್ರಿಗೂ ಬಲ ಬಂದಂತೆ ಆಗುತ್ತದೆ ಎಂದು ತಿಳಿಸಿದ್ದಾರೆ.
ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ಸೇರಲು ಸಚಿವಾಕಾಂಕ್ಷಿಗಳು ತೀವ್ರ ಲಾಬಿ ನಡೆಸಿದ್ದು ಕೆಲವೇ ಕ್ಷಣಗಳಲ್ಲಿ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದೆ.
Key words: Cabinet expansion, Home Minister, Priyank Kharge
The post ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು- ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





