1
October, 2026

A News 365Times Venture

1
Thursday
October, 2026

A News 365Times Venture

ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಆರ್. ಪಾಟೀಲ್

Date:

ಕಲಬುರಗಿ,ಆಗಸ್ಟ್,5,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ  ವೇಳೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ  ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ , ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿ.ಆರ್ ಪಾಟೀಲ್, ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರವನ್ನು ನಿರಾಕರಿಸಿದ್ದಾರೆ. ಇವೆಲ್ಲವೂ ಬರಿ ಸುಳ್ಳು ವದಂತಿಗಳು. ಶಾಸಕ ಸ್ಥಾನ ಎಂಬುದು ತಮಗೆ ಸಿಕ್ಕ ಬರಿ ಅಧಿಕಾರದ ಹುದ್ದೆಯಲ್ಲ, ಬದಲಾಗಿ ಆಳಂದ ಕ್ಷೇತ್ರದ ಜನತೆ ತಮ್ಮ ಮೇಲಿಟ್ಟಿರುವ ಅಪಾರ ನಂಬಿಕೆ ಮತ್ತು ಜವಾಬ್ದಾರಿ. ಕ್ಷೇತ್ರದ ಜನ ನೀಡಿದ ಈ ಪವಿತ್ರ ಜನಾದೇಶಕ್ಕೆ ದ್ರೋಹ ಎಸಗುವ ಪ್ರಶ್ನೆಯೇ ಬರುವುದಿಲ್ಲ ಎಂದಿದ್ದಾರೆ.

ಸಚಿವ ಸ್ಥಾನ ಸಿಗಲಿ ಅಥವಾ ಸಿಗದಿರಲಿ, ಕ್ಷೇತ್ರದ ಜನರ ಸೇವೆ ಮಾಡುವುದನ್ನು ನಿಲ್ಲಿಸುವುದಿಲ್ಲ, ಸಾರ್ವಜನಿಕರು ಹಾಗೂ ಬೆಂಬಲಿಗರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಬಿ.ಆರ್ ಪಾಟೀಲ್ ತಿಳಿಸಿದ್ದಾರೆ.

ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಬಿ.ಆರ್ ಪಾಟೀಲ್, ತಮ್ಮ ಐದು ದಶಕಗಳ ಸುದೀರ್ಘ ರಾಜಕೀಯ ಪಯಣದಲ್ಲಿ ಅಧಿಕಾರ, ವ್ಯಕ್ತಿ ಹಾಗೂ ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷದ ಸಿದ್ಧಾಂತವೇ ಮುಖ್ಯವಾಗಿದೆ. ಎಷ್ಟೇ ಸವಾಲುಗಳು ಎದುರಾದರೂ ಕಾಂಗ್ರೆಸ್ ಪಕ್ಷದ ಮೇಲಿನ ತಮ್ಮ ನಿಷ್ಠೆ ಎಂದಿಗೂ ಅಚಲವಾಗಿರುತ್ತದೆ ಎಂದು ಫೇಸ್ ಬುಕ್ ನಲ್ಲಿ ತಿಳಿಸಿದ್ದಾರೆ.

Key words: B.R. Patil, resigns, Vice Chairman , NITI Aayog

The post ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಆರ್. ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳ: ಬಬಲೇಶ್ವರದ ನಾಲ್ಕು ಗ್ರಾಮಗಳಿಗೆ ತುರ್ತು ಪರಿಹಾರಕ್ಕೆ ಸಚಿವ ಎಂ.ಬಿ ಪಾಟೀಲ್ ಆಗ್ರಹ

ಬೆಂಗಳೂರು,ಅಕ್ಟೋಬರ್‌,1,2026 (www.justkannada.in) ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದಿಂದ ತಾವು ಪ್ರತಿನಿಧಿಸುತ್ತಿರುವ...

ബുര്‍ഖ ധരിച്ച് ലേബര്‍ റൂമിലെത്തിയ വിദ്യാര്‍ത്ഥിനികള്‍ക്ക് വിലക്ക്; ജമ്മു കാശ്മീരില്‍ മെഡിക്കല്‍ വിദ്യാര്‍ത്ഥികളുടെ പ്രതിഷേധം

ശ്രീനഗര്‍: ജമ്മു കാശ്മീരിലെ ദോഡ സര്‍ക്കാര്‍ മെഡിക്കല്‍ കോളേജില്‍ ബുര്‍ഖ ധരിച്ചെത്തിയ...

"சனி, ஞாயிறு விடு​முறை எடுக்கும் ஒரே முதல்வர், ஸ்வீட் ப்ரோ விஜய் தான்!"- திமுக எம்.பி கனிமொழி

மது​ராந்​தகம் திமுக வேட்​பாளர் பரந்​தாமனுக்கு ஆதர​வாக எம்.பி கனிமொழி நேற்று (செப்.30)...

Rain Alert: ఉరుములు, మెరుపులతో మూడు రోజులు వర్షాలు!

Three Days of Rain in AP: బంగాళాఖాతంలో ఏర్పడిన అల్పపీడనం...