ಮೈಸೂರು,ಆಗಸ್ಟ್,22,2026 (www.justkannada.in): ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ರೈತರ ಆಕ್ರೋಶ ಭುಗಿಲೆದ್ದಿದೆ.
ಪ್ರತಿನಿತ್ಯ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕು ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ 10 ಅಡಿ ಕುಸಿದಿದೆ. 10 ಅಡಿ ನೀರು ಖಾಲಿಯಾದ ಮೇಲೆ ಎಚ್ಚೆತ್ತ ರೈತರು ಹಾಗೂ ಜನರು ಇದೀಗ ಪ್ರತಿಭಟನೆಗಿಳಿದಿದ್ದು ಕೋಟೆ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತಾಗಿದೆ.
ಕಬಿನಿ ಜಲಾಶಯದ ಬಳಿ ಸಾವಿರಾರು ರೈತರ ಪ್ರತಿಭಟನೆ ನಡೆಸುತ್ತಿದ್ದು ಕಬಿನಿ ಡ್ಯಾಂಗೆ ಮುತ್ತಿಗೆ ಹಾಕಲು ಮುಂದಾದರು. ತಮಿಳುನಾಡಿಗೆ ನೀರು ಹರಿಸುವುದನ್ನ ನಿಲ್ಲಿಸಿ ಎಂದು ರಾಜ್ಯಸರ್ಕಾರ, ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್, ತಮಿಳುನಾಡು ಜೋಸೆಫ್ ವಿಜಯ್ ವಿರುದ್ಧ ಕಿಡಿಕಾರಿರುವ ಪ್ರತಿಭಟನಾಕಾರರು ರೈತರ ಹಿತ ಕಾಪಾಡಿ, ಕುಡಿಯಲು ನೀರು ಉಳಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Key words: Water, Tamil Nadu, Farmers, protest, Kabini Dam
The post ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





