ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೆಪಿಎಸ್ ಸಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಸಿಎಂ ಗೃಹ ಕಚೇರಿ ಕೃಷ್ಣ ಮುಂದೆ ರಸ್ತೆಯಲ್ಲಿ ಕುಳಿತು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಸಿಎಂಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ವೇಳೆ ಪೊಲೀಸರು ಪ್ರತಿಭಟನಾನಿರತ ಎಬಿವಿಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು. ಈ ನಡುವೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನ ಪೊಲೀಸರು ಎಳೆದಾಡಿದ ಆರೋಪ ಕೇಳಿ ಬಂದಿದೆ.
Key words: KPSC scam, investigation, CBI, ABVP, protests
The post KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





