ಬೆಂಗಳೂರು,ಆಗಸ್ಟ್,25,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿಯು 329 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯದ (ED) ವಿಚಾರಣೆ ವೇಳೆ ಕೆಲ ಅಭ್ಯರ್ಥಿಗಳು ಅಕ್ರಮ ಎಸಗಿರುವುದಾಗಿ ತಪ್ಪೊಪ್ಪಿಗೆ ನೀಡಿದ ಬೆನ್ನಲ್ಲೇ, ಸಿಐಡಿ ಅಧಿಕಾರಿಗಳು 329 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದ್ದು ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ನೋಟಿಸ್ ಸ್ವೀಕರಿಸಿರುವ ಎಲ್ಲಾ 329 ಅಭ್ಯರ್ಥಿಗಳು ಯಾವುದೇ ನೆಪ ಹೇಳದೆ ಇಂದೇ ಖುದ್ದಾಗಿ ಸಿಐಡಿ ಕಚೇರಿಯ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Key words: Veterinary officer, recruitment, scam, CID, notices , 329 candidates
The post ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





