ಬೆಳಗಾವಿ, ಸೆಪ್ಟೆಂಬರ್, 15,2026 (www.justkannada.in): ಗಣೇಶ ಹಬ್ಬದ ದಿನದಂದೇ ಭೀಕರ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಬೆಳಗಾವಿ ನಗರದ ಚಾವ್ಹಾಣ್ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರಾಜಾರಾಮ ದಮೋನೆ (50) ಮೃತಪಟ್ಟವರು ಎಂದು ಹೇಳಲಾಗುತ್ತಿದೆ . ಗಾಯಗೊಂಡ ಪ್ರಿಯಾ ಗಜಾನನ ದಮೋನೆ ಮತ್ತು ಗಂಗಾ ಗಜಾನನ ದಮೋನೆ ಎಂಬುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಡುಗೆಮನೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಘಟನೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Key words: Horrific fire tragedy, four members, same family, burnt, alive.





