17
September, 2026

A News 365Times Venture

17
Thursday
September, 2026

A News 365Times Venture

ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದೇ ಒಂದು ಅಂಶವಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಕಿಡಿ

Date:

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in): “ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಯಾವ ಅಂಶವೂ ಇಲ್ಲ. ಅವರದ್ದು ಕೇವಲ ರಾಜಕೀಯ ಮನಸ್ಥಿತಿ. ಅವರನ್ನು ಸರಿಪಡಿಸಲು ಆಗುವುದಿಲ್ಲ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ಕಿಡಿಕಾರಿದರು.

ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಸಿಎಂ ಡಿಕೆ ಶಿವಕುಮಾರ್ ಅವರು ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ವಂದೇ ಮಾತರಂ ವಿಚಾರವಾಗಿ ಬಿಜೆಪಿ ಹೋರಾಟಕ್ಕೆ ಕರೆ ನೀಡಿರುವ ಬಗ್ಗೆ ಕೇಳಿದಾಗ, “ಎಲ್ಲದರಲ್ಲೂ ತಪ್ಪು ಕಂಡುಹಿಡಿಯುವ ಪ್ರವೃತ್ತಿ ಬಿಜೆಪಿ ನಾಯಕರದ್ದು. ಒಬ್ಬ ಪೊಲೀಸ್ ಅಧಿಕಾರಿ ಏನು ತಪ್ಪು ಮಾತನಾಡಿದ್ದಾರೆ? ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಎಚ್ಚರಿಕೆ ಮಾತುಗಳನ್ನು ಆಡಿದ್ದಾರೆ. ಅದಕ್ಕೆ ಬಿಜೆಪಿಯವರು ಮಹಾರಾಜರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಪಂಚಾಯಿತಿ ಮಟ್ಟದ ವಿಚಾರಕ್ಕೆ ವಿರೋಧ ಪಕ್ಷದ ನಾಯಕರು ಹೋಗಿದ್ದು, ಅವರು ಈ ಮಟ್ಟಕ್ಕೆ ಇಳಿದಿದ್ದು ಯಾಕೆ ಎಂದು ನನಗೆ ಗೊತ್ತಿಲ್ಲ. ವಿರೋಧ ಪಕ್ಷದ ನಾಯಕ ಸ್ಥಾನ ಸಂವಿಧಾನಿಕ ಹುದ್ದೆ. ಅವರಿಂದ ಇನ್ನು ಉನ್ನತ ನಡೆ ನಿರೀಕ್ಷೆ ಮಾಡುತ್ತಿದ್ದೇನೆ” ಎಂದು ತಿಳಿಸಿದರು.

“ಅವರು ಹೇಳಿದರು ಎಂದು ಪ್ರಹ್ಲಾದ್ ಜೋಶಿಯಿಂದ ಎಲ್ಲರೂ ಟ್ವೀಟ್ ಮಾಡಿದ್ದಾರೆ. ಸಮಾಜದಲ್ಲಿ ಕಾನೂನು ಪಾಲನೆ ಮಾಡಬೇಕಾಗಿರುವುದು ಯಾರು? ಬಿಜೆಪಿಯವರು ಜನರನ್ನ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದ್ದು, ಇನ್ನಾದರೂ ಇದನ್ನು ಬಿಡಲಿ. ಭಾರತವನ್ನು ಕರ್ನಾಟಕದ ಮೂಲಕ ಗೌರವ ಸಿಗುತ್ತಿದ್ದು, ಇಲ್ಲಿ ಅಹಿತಕರ ಘಟನೆ ನಡೆದರೆ ತೊಂದರೆ ಆಗುವುದು ಭಾರತಕ್ಕೆ. ಪ್ರಧಾನ ಮಂತ್ರಿಗಳು ದೇಶದ ಬಗ್ಗೆ ಕಾಣುತ್ತಿರುವ ಕನಸಿಗೆ ಇಲ್ಲಿನ ಬಿಜೆಪಿ ನಾಯಕರು ಧಕ್ಕೆ ತರುವಂತೆ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಮಾಡುವುದನ್ನು ಮಾಡಿ, ಹೋರಾಟ ಮಾಡಿ. ಆದರೆ ಅಶಾಂತಿ ಮೂಡಿಸಿ, ರಾಜ್ಯಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಬೇಡಿ ಎಂದು ಮನವಿ ಮಾಡುವೆ” ಎಂದು ತಿಳಿಸಿದರು.

ಬರ ವಿಚಾರದಲ್ಲಿ ರಾಜಕೀಯ ಮಾಡಿದರೆ ಅರ್ಥವಿಲ್ಲ

ದಿನೇ ದಿನೆ ಮಳೆ ಕಡಿಮೆಯಾಗುತ್ತಿರುವ ಬಗ್ಗೆ ಕೇಳಿದಾಗ, “ಮಳೆ ಕ್ಷೀಣಿಸುತ್ತಿದೆ. ಶಾಸಕರು ಆತಂಕಪಡುವ ಅಗತ್ಯವಿಲ್ಲ. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುವುದರಲ್ಲಿ ಅರ್ಥವಿಲ್ಲ. ಕೆಲವರು ರಾಜಕೀಯಕ್ಕೆ ಈ ಪರಿಸ್ಥಿತಿ ಬಳಸಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಪರಿಶೀಲನೆಗೆ ಬಂದಾಗ ವರದಿ ತಪ್ಪಾಗಿರಬಾರದು. ಕೆಲವು ಭಾಗದಲ್ಲಿ ಅಧ್ಯಯನ ಆಗಿದ್ದು, ಉಳಿದ ಕಡೆ ವರದಿ ಸಿದ್ಧವಾಗುತ್ತಿದೆ. ಒಂದು ವಾರ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಹೇಳಿತ್ತು, ಆದರೆ ಕೆಲ ಭಾಗದಲ್ಲಿ ಸ್ವಲ್ಪ ಮಳೆ ಆಗಿದ್ದು, ಹೇಳಿಕೊಳುವಂತೆ ಆಗಿಲ್ಲ. ವಿದ್ಯುತ್ ಸಮಸ್ಯೆ ಹೆಚ್ಚಾಗಿದೆ. ಜನರನ್ನು ಮಾನಸಿಕವಾಗಿ ಸಿದ್ಧಪಡಿಸಿ, ಕುಡಿಯುವ ನೀರು ಪೂರೈಕೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ  ವಿಶೇಷ ಅಧಿವೇಶನ ಕರೆಯಲಾಗಿದೆ. ರೈತರ ಜೊತೆ ಚರ್ಚೆ ಮಾಡಿ ಇನ್ನಷ್ಟು ಘೋಷಣೆ ಮಾಡಲಾಗುವುದು” ಎಂದು ಹೇಳಿದರು.

 

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಪಘಾತಕ್ಕೀಡಾದ ನರಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ಚೆಸ್ಕಾಂ ಅಧಿಕಾರಿ..

ಮೈಸೂರು,ಸೆಪ್ಟಂಬರ್,17,2026 (www.justkannada.in):  ರಸ್ತೆ ಅಪಘಾತದಲ್ಲಿ ಗಾಯಗೊಂಡು ಸಾವು-ನೋವಿನ ನಡುವೆ ನರಳುತ್ತಿದ್ದ...

സഖ്യകക്ഷികൾ ഒഴിഞ്ഞുമാറുന്നു; ഹൂതികൾക്ക് മുന്നിൽ പ്രതിസന്ധിയിലായി സൗദി അറേബ്യ

റിയാദ്: യെമനിലെ ഹൂതി വിമതരുടെ ആക്രമണം വീണ്ടും ശക്തമായതോടെ സൗദി അറേബ്യ...

லண்டன் பயணம்: “முதல்வர் விஜய் செய்தியாளர்களைச் சந்தித்து…" – டி.ஆர்.பி. ராஜா அடுக்கும் கேள்விகள்

முதல்வர் விஜய் முதலீடுகளை ஈர்க்க லண்டன் பயணம் மேற்கொண்டிருந்த நிலையில், லண்டன்...

OTR: కేంద్ర మంత్రి బండి సంజయ్ కు కీలక బాధ్యతలు..?

OTR: తెలంగాణ కమలంలో కొత్త ఈక్వేషన్స్‌ తెరపైకి రాబోతున్నాయా? వచ్చే ఎన్నికల్లో...