ಬೆಂಗಳೂರು,ಸೆಪ್ಟಂಬರ್,28,2026 (www.justkannada.in): ಅಕ್ಟೋಬರ್ 11 ರಂದು ನಡೆಯುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಅಧಿಕೃತವಾಗಿ ಆಹ್ವಾನಿಸಿದರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವ ಸಿಎಂ ಡಿಕೆ ಶಿವಕುಮಾರ್, ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಅಧಿಕೃತವಾಗಿ ಆಹ್ವಾನಿಸಿದರು.
ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಪ್ರತೀಕವಾಗಿರುವ ಪೂಜ್ಯ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೊಳ್ಳುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ.
ಈ ವೇಳೆ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು. 
ಐತಿಹಾಸಿಕ ದಸರಾ ಮಹೋತ್ಸವಕ್ಕೆ ಎಲ್ಲರೂ ತಪ್ಪದೇ ಬನ್ನಿ… ಸಾಂಸ್ಕೃತಿಕ ವೈಭವವನ್ನು ಕಣ್ತುಂಬಿಕೊಳ್ಳಿ ಎಂದು ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.





