ಬೆಂಗಳೂರು, ಅಕ್ಟೋಬರ್,6,2026 (www.justkannada.in): ಎಸ್ ಐಆರ್ ಪ್ರಕ್ರಿಯೆಯಲ್ಲಿ ಫಾರ್ಮ್ 7 ಅನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ವಿರುದ್ದ ಎಫ್ ಐಆರ್ ದಾಖಲಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ಈ ಸಂಬಂಧ ದೂರು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಆರ್ .ಅಶೋಕ್ ನೇತೃತ್ವದಲ್ಲಿ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ದೂರು ಸಲ್ಲಿಕೆ ಮಾಡಿದ್ದಾರೆ.
ಫಾರ್ಮ್ 7 ಅನ್ನು ದುರ್ಬಳಕೆ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ವಿರುದ್ದ ಸುಮ್ಮನೆ ಎಫ್ ಐಆರ್ ದಾಖಲಿಸುತ್ತಿದ್ದಾರೆ ಎಂದು ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ದ ದೂರು ಸಲ್ಲಿಸಿದರು. ಈ ವೇಳೆ ಎಂಎಲ್ ಸಿ ಭೋಜೇಗೌಡ, ಟಿಎ ಶರವಣ ಸೇರಿ ಹಲವರು ಉಪಸ್ಥಿತರಿದ್ದರು.





